ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಜ. 15ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
’15ರಂದು ರಾಜಭವನಗಳಿಗೆ ಮುತ್ತಿಗೆ ಹಾಕಲಾಗುವುದು. ಮುಂಬರುವ ಬಜೆಟ್ ಅಧಿವೇಶನದ ವೇಳೆ ಸಂಸತ್ ಕಲಾಪಕ್ಕೆ ಅಡ್ಡಿಪಡಿಸಲು ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೇವಾಲಾ ತಿಳಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ರಾಜ್ಯಗಳ ಉಸ್ತುವಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
Laxmi News 24×7