Breaking News

‘ಆನ್‌ಲೈನ್ ಮಾರುಕಟ್ಟೆ ಬಳಸಿಕೊಂಡು ಮಾರಾಟಗಾರರು ಗ್ರಾಹಕರಿಗೆ ಮಾಡುವ ಮೋಸಕ್ಕೆ ಇ- ಕಾಮರ್ಸ್‌ ಸಂಸ್ಥೆಗಳು ಜವಾಬ್ದಾರಿ ಆಗುವುದಿಲ್ಲ’ ಎಂದಹೈಕೋರ್ಟ್

Spread the love

ಬೆಂಗಳೂರು: ‘ಆನ್‌ಲೈನ್ ಮಾರುಕಟ್ಟೆ ಬಳಸಿಕೊಂಡು ಮಾರಾಟಗಾರರು ಗ್ರಾಹಕರಿಗೆ ಮಾಡುವ ಮೋಸಕ್ಕೆ ಇ- ಕಾಮರ್ಸ್‌ ಸಂಸ್ಥೆಗಳು ಜವಾಬ್ದಾರಿ ಆಗುವುದಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಸ್ನ್ಯಾಪ್‌ಡೀಲ್ ಸಂಸ್ಥೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆ ರದ್ದು ಪಡಿಸಿದ ನ್ಯಾಯಾಲಯ, ಈ ಅಭಿಪ್ರಾಯಪಟ್ಟಿದೆ.

ವೆಬ್‌ಸೈಟ್‌ನಲ್ಲಿ ಜಾಹೀರಾತು ಪ್ರದರ್ಶಿಸಿರುವ ಉತ್ಪನ್ನವೊಂದು ಔಷಧ ಮತ್ತು ಸೌಂದರ್ಯವರ್ಧಕ ಕಾಯ್ದೆಗೆ ವಿರುದ್ಧವಾಗಿದೆ ಸ್ನ್ಯಾಪ್‌ಡೀಲ್ ವಿರುದ್ಧ ಮೈಸೂರಿನ ಉಪ ಔಷಧ ನಿಯಂತ್ರಕರು ‌ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಸ್ನ್ಯಾಪ್‌ಡೀಲ್ ಪರವಾಗಿ ಹಾಜರಾದ ಹಿರಿಯ ವಕೀಲ ಸಿ.ವಿ. ನಾಗೇಶ್, ‘ಸ್ನ್ಯಾಪ್‌ಡೀಲ್ ಮಧ್ಯವರ್ತಿಯಾಗಿ ಅಷ್ಟೇ ಕೆಲಸ ಮಾಡಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79 ಪ್ರಕಾರ ಹೊಣೆಗಾರಿಕೆಯಿಂದ ವಿನಾಯಿತಿ ಪಡೆಯಲು ಇ-ಕಾಮರ್ಸ್ ಸಂಸ್ಥೆ ಅರ್ಹವಾಗಿದೆ’ ಎಂದು ವಾದಿಸಿದರು.

‘ವೆಬ್‌ಸೈಟ್‌ನಲ್ಲಿ ಮಾರಾಟ ವಾಗುವ ಎಲ್ಲಾ ಉತ್ಪನ್ನಗಳ ಬಗ್ಗೆ ಇ-ಕಾಮರ್ಸ್ ಸಂಸ್ಥೆಯವರು ತಿಳಿದಿರಬೇಕು ಎಂದು ನಿರೀಕ್ಷಿಸಲು ಆಗುವುದಿಲ್ಲ’ ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅಭಿಪ್ರಾಯಪಟ್ಟರು.


Spread the love

About Laxminews 24x7

Check Also

ಶಾಲಾ ಮಕ್ಕಳ ಆತ್ಮಹತ್ಯೆ ತಡೆಗೆ ನೀತಿ ಜಾರಿ – ಮಹದೇವಪ್ಪ

Spread the loveಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ