ಬೆಂಗಳೂರು : ಸಂಕ್ರಾಂತಿ ಹಬ್ಬಕ್ಕೆ ಹಾಲು ಉತ್ಪಾದಕರಿಗೆ ಭರ್ಜರಿ ಸಿಹಿಸುದ್ದಿ ಸಿಗುವ ಸಾಧ್ಯತೆ ಇದ್ದು, ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟವು ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.
ಬಮೂಲ್ ಹಾಲು ಒಕ್ಕೂಟವು ಪ್ರತಿ ಲೀಟರ್ ಹಾಲಿಗೆ 25.30 ರೂ. ನೀಡುತ್ತಿದೆ. ಅದರಲ್ಲಿ 24 ರೂ. ಹಾಲು ಉತ್ಪಾದಕರಿಗೆ ಮತ್ತು 1.30 ರೂ. ಸೊಸೈಟಿಗೆ ಸಿಗುತ್ತಿದೆ. ಬಮೂಲ್ ಸಂಕ್ರಾಂತಿ ಬಳಿಕ 1 ರೂ. ಹೆಚ್ಚಿಸಿದರೆ ಪ್ರತಿ ಲೀಟರ್ ಹಾಲಿಗೆ 26.40 ರೂ. ಸಿಗಲಿದೆ ಎನ್ನಲಾಗಿದೆ.
ಬೆಂಗಳೂರು ಡೈರಿ ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ 12 ತಾಲೂಕುಗಳ 1.20 ಲಕ್ಷಕ್ಕಿಂತ ಅಧಿಕ ಹಾಲು ಉತ್ಪಾದಕರು ಇದರ ಲಾಭ ಪಡೆಯಲಿದ್ದಾರೆ.