ಹುಬ್ಬಳ್ಳಿ: ಬಿಜೆಪಿಯವರು ರಸ್ತೆಯಲ್ಲಿ ಹೊಡೆದಾಡಿ ಲೀಡರ್ ಆಗುತ್ತಾರೆ. ಕಾಂಗ್ರೆಸ್ ಪಕ್ಷದ ಇಬ್ಬರು ಲೀಡರ್‌ಗಳು ರೂಮಿನಲ್ಲಿ ಒಳಗಡೆ ಹೋದ್ರೆ ಒಬ್ಬ ಲೀಡರ್ ಹುಟ್ಟುತ್ತಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಲ್ಲಿ ನಿನ್ನೆ ಭಾನುವಾರ ನಡೆದ ಬಿಜೆಪಿ ಜನಸೇವಕ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಹಿಂದೆ ಪ್ರಿಯಾಂಕಾ ಗಾಂಧಿಗೆ ಗಂಡು ಮಗು ಹುಟ್ಟಿದಾಗ ಲೀಡರ್ ಹುಟ್ಟಿದ್ದಾನೆಂದು ಕಾಂಗ್ರೆಸ್ ಕಾರ್ಯಕರ್ತರು ಸ್ವೀಟ್ ಹಂಚಿದ್ರು ಎಂದು ಗಾಂಧಿ ಕುಟುಂಬದ ಬಗ್ಗೆ ಲೇವಡಿ ಮಾಡಿದ್ದಾರೆ.
ರಾಹುಲ್ ಗಾಂಧಿ ಅವರ ಜೀವನಕ್ಕೆ ಒಂದು ಪ್ಲ್ಯಾನ್ ಇಲ್ಲಾ. ಅವರು ಲಾಕ್‌ಡೌನ್ ಅನ್ನು ಅನ್ ಪ್ಲ್ಯಾನ್ಡ್ ಎಂದು ಟ್ವೀಟ್ ಮಾಡಿದ್ದರು. ಟ್ವೀಟ್ ಮಾಡಿ ದೇಶ ಬಿಟ್ಟು ಅವರ ಪೂರ್ವಜರನ್ನು ನೋಡಲಿಕ್ಕೆ ವಿದೇಶಕ್ಕೆ ಹೋಗಿದ್ದರು ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.ಗ್ರಾಮ ಪಂಚಾಯತಿ ಸದಸ್ಯರು ಸರಿಯಾಗಿ ಕೆಲಸ ಮಾಡಬೇಕು. ಉತ್ತಮ ಕೆಲಸ ಮಾಡಿದ್ರೆ ಒಬ್ಬ ಗ್ರಾಮ ಪಂಚಾಯತಿ ಸದಸ್ಯ ದೇಶದ ಪ್ರಧಾನಿಯಾಗಬಹುದು. ಇದು ನಮ್ಮ ಪಕ್ಷದಲ್ಲಿ ಮಾತ್ರ ಸಾಧ್ಯ. ಆದ್ರೆ ಕಾಂಗ್ರೆಸ್ ಪಕ್ಷದಲ್ಲಿ ಮುಖಂಡರ ಮನೆಯಲ್ಲಿ ಹುಟ್ಟಿದವರು ಮಾತ್ರ ಶಾಸಕರು, ಲೋಕಸಭಾ ಸದಸ್ಯರು ಆಗ್ತಾರೆ ಎಂದು ಕೇಂದ್ರ ಸಚಿವರು ವಾಗ್ದಾಳಿ ನಡೆಸಿದ್ದಾರೆ
Laxmi News 24×7