Breaking News

ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭ

Spread the love

ಬೆಂಗಳೂರು: ಕೊರೊನಾ ಮಹಾಮಾರಿಗೆ ಬ್ರಹ್ಮಾಸ್ತ್ರವಾಗಿರುವ ಕೋವಿಶೀಲ್ಡ್ ಲಸಿಕೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದು ತಲುಪಿದೆ.

ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಪೂರೈಕೆ ಆರಂಭವಾಗಿದೆ.

ಪುಣೆಯ ಸೀರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದಲ್ಲಿ ಎರಡು ಪ್ರಮುಖ ಸ್ಥಳಗಳಿಗೆ ರವಾನಿಸಲಾಗುತ್ತಿದ್ದು, ಈಗಾಗಲೇ ಪುಣೆಯಿಂದ ಸ್ಪೈಸ್ ಜೆಟ್ ವಿಶೇಷ ವಿಮಾನದಲ್ಲಿ Z+ ಭದ್ರತೆಯ ಮೂಲಕ ಕೋವಿಶೀಲ್ಡ್ ಲಸಿಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ತಲುಪಿದೆ.

54 ಬಾಕ್ಸ್ ಗಳಲ್ಲಿ 7,94,500 ಡೋಸ್ ಕೋವಿಶೀಲ್ಡ್ ಲಸಿಕೆ ಬಂದಿದ್ದು, ಅಲ್ಲಿಂದ ಬೆಂಗಳೂರಿನ ವ್ಯಾಕ್ಸಿನ್ ಸೆಂಟರ್ ಗೆ ಲಸಿಕೆ ರವಾನಿಸಲಾಗುತ್ತಿದೆ. ಬಳಿಕ ರಾಜ್ಯದ ವಿವಿಧ ಜಿಲ್ಲೆಗಳ ಕೋವಿಡ್ ಲಸಿಕಾ ಕೇಂದ್ರಗಳಿಗೆ ಪೂರೈಸಲಾಗುತ್ತದೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Spread the loveಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಎಸ್‌ಐಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ