Breaking News

ನಮ್ಮ ಟೀಂ ನಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕು.: ರಮೇಶ್ ಜಾರಕಿಹೊಳಿ ಬಾಂಬ್ ಸಿಡಿಸಿದ್ದಾರೆ.

Spread the love

ಬೆಳಗಾವಿ: ನಮ್ಮ ಟೀಂ ನ ಇನ್ನೂ ಹಲವರಿಗೆ ಸಚಿವ ಸ್ಥಾನ ಸಿಗಬೇಕಿದೆ. ಮಾರ್ಚ್-ಏಪ್ರಿಲ್ ನಲ್ಲಿ ದೊಡ್ಡ ಮಟ್ಟದಲ್ಲಿ ಸಂಪುಟ ಪುನರಚನೆಯಾಗಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬಾಂಬ್ ಸಿಡಿಸಿದ್ದಾರೆ.

ಈಗ ಸಚಿವ ಸ್ಥಾನ ಕೈತಪ್ಪಿದವರಿಗೆ ಆಗ ಸ್ಥಾನ ಸಿಗುವ ವಿಶ್ವಾಸವಿದೆ ಎಂದೂ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ, ಇಂದು 7 ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದು, ಮಾರ್ಚ್-ಏಪ್ರಿಲ್ಲ್ ನಲ್ಲಿ ನಡೆಯಲಿರುವ ಸಂಪುಟ ಪುನಾರಚನೆಯಲ್ಲಿ ಇಂದು ಸಚಿವ ಸ್ಥಾನ ಕೈತಪ್ಪಿದವರಿಗೆ ಅಂದು ಸಿಗಲಿದೆ. ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಉಪಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಸಂಪುಟ ಪುನಾರಚನೆಯಾಗಲಿದೆ ಎಂದಿದ್ದಾರೆ.

ನಮ್ಮ ಟೀಂ ನಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕು. ಹೆಚ್.ವಿಶ್ವನಾಥ್, ಮಹೇಶ್ ಕುಮಟಳ್ಳಿ, ಮುನಿರತ್ನ, ಗುಲ್ಬರ್ಗಾದಲ್ಲಿ ಪಕ್ಷ ಕಟ್ಟಿ ದೊಡ್ಡ ವ್ಯಕ್ತಿ ಸೋಲಿಸಿದವರು ಮಾಲೀಕಯ್ಯ ಗುತ್ತೇದಾರ್ ಅವರಿಗೂ ಸಚಿವ ಸ್ಥಾನ ಸಿಗಬೇಕು ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ