Breaking News
Home / ಜಿಲ್ಲೆ / ಚಿಕ್ಕ ಮಂಗಳೂರು / ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೊನಾಗೆ ನಾಲ್ಕು ಜನ ಪ್ರಾಣ ತೆತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ.

ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೊನಾಗೆ ನಾಲ್ಕು ಜನ ಪ್ರಾಣ ತೆತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ.

Spread the love

ಚಿಕ್ಕಮಗಳೂರು: ಸೋಮವಾರ ಎರಡು, ಮಂಗಳವಾರ ಒಂದು, ಬುಧವಾರ ಒಂದು ಎಂಬಂತೆ ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೊನಾಗೆ ನಾಲ್ಕು ಜನ ಪ್ರಾಣ ತೆತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದ್ದು ಜಿಲ್ಲೆಯ ಜನ ತೀವ್ರ ಆತಂಕಕ್ಕೀಡಾಗಿದ್ದಾರೆ. ಜಿಲ್ಲೆಯ 72 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾಗೆ ಪ್ರಾಣ ತೆತ್ತವರ ಸಂಖ್ಯೆ ಏಳಕ್ಕೆ ಏರಿದೆ.

ಜಿಲ್ಲೆಯಲ್ಲಿ ಪ್ರಸ್ತುತ 170 ಕೊರೊನಾ ಪಾಸಿಟಿವ್ ಪ್ರಕರಣಗಳಿವೆ. 170ರಲ್ಲಿ ಏಳು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅವುಗಳಲ್ಲಿ ಮೂರೇ ದಿನಕ್ಕೆ ನಾಲ್ವರು ಪ್ರಾಣ ಕಳೆದುಕೊಂಡಿದ್ದು ಜಿಲ್ಲೆಯ ಜನ ಜಿಲ್ಲೆಯಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ ಎಂದು ತಮಗೆ ತಾವೇ ವಿಮರ್ಶೆ ಮಾಡಿಕೊಂಡು ಭಯದಲ್ಲಿ ಬದುಕುವಂತಾಗಿದೆ. ಜಿಲ್ಲೆಯಲ್ಲಿ ಕೊರೊನಾ ಆರಂಭದ ಮೊದಲ 55 ದಿನಗಳ ಕಾಲ ಒಂದೇ ಒಂದು ಕೊರೊನಾ ಪಾಸಿಟಿವ್ ಪ್ರಕರಣಗಳು ಇರಲಿಲ್ಲ.

ಆದರೆ ಮೇ 19ಕ್ಕೆ ಆರಂಭವಾದ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 55 ದಿನಕ್ಕೆ 176 ಗಡಿ ತಲುಪಿದೆ. ಆ 170 ಪ್ರಕರಣಗಳಲ್ಲಿ ಏಳು ಜನ ಪ್ರಾಣ ಕಳೆದುಕೊಂಡಿರುವುದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಗುಣಮುಖವಾಗುತ್ತಿರುವ ಪ್ರಕರಣಗಳ ಸಂಖ್ಯೆಯು ಹೆಚ್ಚಿದೆ. ಆದರೆ ಈ ಮಧ್ಯೆ ಸಾವಿನ ಸಂಖ್ಯೆ ಕೂಡ ಹೆಚ್ಚಾಗಿರುವುದು ಜಿಲ್ಲೆಯ ಜನರ ನಿದ್ದೆಗೆಡಿಸಿದೆ.


Spread the love

About Laxminews 24x7

Check Also

ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವ ಮೋರ್ಚಾ ಘಟಕ ಸದಸ್ಯರು

Spread the loveಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಪಕ್ಷದ ವಿರುದ್ಧವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ