Breaking News

ಸಂಪುಟ ವಿಸ್ತರಣೆಯ ಅಸಮಾಧಾನದಿಂದ ಸರ್ಕಾರಕ್ಕೆ ಮತ್ತಷ್ಟು ಅಧೋಗತಿ; ಸಿದ್ದರಾಮಯ್ಯ

Spread the love

ಮೈಸೂರು (ಜ. 13): ಬಿಜೆಪಿ ಸರ್ಕಾರ ಈಗಾಗಲೇ ಅಧೋಗತಿಗೆ ಇಳಿದಿದೆ. ಇದೀಗ ಸಂಪುಟ ವಿಸ್ತರಣೆಯ ಅಸಮಾಧಾನದಿಂದ ಮತ್ತಷ್ಟು ಅಧೋಗತಿಗೆ ಹೋಗಲಿದೆ. ಸಂಪುಟ ಪೂರ್ತಿಯಾದ ಮಾತ್ರಕ್ಕೆ ಈ ಸರ್ಕಾರ ಪರಿಪೂರ್ಣ ಆಗುವುದಿಲ್ಲ. ಆದರೆ, ಮಂತ್ರಿ ಮಂಡಲ ವಿಸ್ತರಣೆಯಿಂದಾಗಿ ಯಡಿಯೂರಪ್ಪ ಇನ್ನೂ ಸ್ವಲ್ಪ ದಿನ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಅನಿಸುತ್ತಿದೆ ಎನ್ನುವ ಮೂಲಕ ಸಿಎಂ ಬದಲಾಗುತ್ತಾರೆ ಎಂಬ ತಮ್ಮ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಉಲ್ಟಾ ಹೊಡೆದಿದ್ದಾರೆ.

ಈ ಹಿಂದೆ ಸದ್ಯದಲ್ಲೇ ಸಿಎಂ ಸ್ಥಾನದಿಂದ ಬಿಎಸ್ ಯಡಿಯೂರಪ್ಪ ಕೆಳಗಿಳಿಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದ ಸಿದ್ದರಾಮಯ್ಯ ಇದೀಗ ಉಲ್ಟಾ ಹೊಡೆದಿದ್ದಾರೆ. ಈಗ ಸಂಪುಟ ವಿಸ್ತರಣೆ ಆಗುವುದನ್ನು ನೋಡಿದರೆ ಇನ್ನು ಸ್ವಲ್ಪ ದಿನ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯಬಹುದು. ಬಹುಶಃ ಸಂಪುಟ ವಿಸ್ತರಣೆ ಆದ ನಂತರ ರಾಜೀನಾಮೆ ಕೊಡ್ತೀನಿ ಅಂತ ಹೇಳಿರಬಹುದೇನೋ. ನಮಗಿದ್ದ ಮಾಹಿತಿ ಪ್ರಕಾರ ಹೈಕಮಾಂಡ್ ಸಿಎಂ ಯಡಿಯೂರಪ್ಪನವರ ರಾಜೀನಾಮೆ ಕೇಳಿದ್ದರು. ಬಹುಶಃ ಸಂಪುಟ ವಿಸ್ತರಣೆ ಮಾಡಿದ ನಂತರ ರಾಜೀನಾಮೆ ನೀಡುತ್ತೇನೆ ಎಂದು ಹೇಳಿರಬಹುದು. ಹಾಗಾಗಿ ಇನ್ನು ಸ್ವಲ್ಪ ದಿನ ಅವರೇ ಸಿಎಂ ಆಗಿ ಉಳಿಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.ಇಂದು ಸಂಜೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಈಗಾಗಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 7 ನೂತನ ಸಚಿವರ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, 7 ಜನರನ್ನು ಸಂಪುಟಕ್ಕೆ ಸೇರಿಸಿಕೊಂಡರೂ ಈ ಸರ್ಕಾರ ಟೇಕ್ ಆಫ್ ಆಗೋದಿಲ್ಲ. ಮಂತ್ರಿ ಮಂಡಲ ಪೂರ್ತಿಯಾದ ತಕ್ಷಣ ಈ ಸರ್ಕಾರ ಪರಿಪೂರ್ಣ ಆಗೋದಿಲ್ಲ. ಯಾರ್ಯಾರಿಗೆ ಸಚಿವ ಸ್ಥಾನ ಕೊಟ್ಟಿದ್ದಾರೋ ಅಂತ ನಾನು ನೋಡೋಕೆ ಹೋಗಿಲ್ಲ. ಅಥವಾ ಯಾರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತಾನೂ ವಿಚಾರಿಸಲು ಹೋಗಿಲ್ಲ. ಅದರ ಬಗ್ಗೆ ನಾನು ಮಾತನಾಡಲು ಹೋಗೋದಿಲ್ಲ ಎಂದಿದ್ದಾರೆ.


Spread the love

About Laxminews 24x7

Check Also

ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲಾ:,ಶೆಟ್ಟರ್

Spread the loveಚಾಮರಾಜನಗರ: ಇದೇ ರೀತಿ ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ