ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದಂತ ಸಚಿವ ಹೆಚ್.ನಾಗೇಶ್ ಸಿಎಂ ಸೂಚನೆಯ ಮೇರೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂತಹ ಹೆಚ್ ನಾಗೇಶ್ ಗೆ ಡಾ.ಅಂಬೇಡ್ಕರ್ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ನಾನ್ ಮಾಡಿದ್ದಾದ್ರೂ ಏನು..? ಯಾಕೆ ನನಗೆ ಮೋಸ ಮಾಡಿದ್ರೆ ಎಂಬುದಾಗಿ ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತ ಸಂದರ್ಭದಲ್ಲಿ ಹೆಚ್ ನಾಗೇಶ್ ತಮ್ಮ ಅಸಮಾಧಾನ ವ್ಯಕ್ತ ಪಡಿಸಿದ್ದರು. ಇಂತಹ ಹೆಚ್ ನಾಗೇಶ್ ಅವರನ್ನು ಸಮಾಧಾನ ಮಾಡುವ ಸಲುವಾಗಿ ಸಿಎಂ ಯಡಿಯೂರಪ್ಪ ಅವರು, ನಾಗೇಶ್ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿದ್ದಾರೆ.
ಇದೀಗ ಹೆಚ್ ನಾಗೇಶ್ ಅವರನ್ನು ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದ್ದಾರೆ. ಈ ಮೂಲ ಹೆಚ್ ನಾಗೇಶ್ ಅವರಿಗೆ ಸಂಪುಟ ದರ್ಜೆಯ ಸ್ಥಾನ ಮಾನ ನೀಡಿ, ಸಮಾಧಾನ ಮಾಡುವ ಕೆಲಸವನ್ನು ಸಿಎಂ ಯಡಿಯೂರಪ್ಪ ಮಾಡಿದ್ದಾರೆ.
Laxmi News 24×7