Breaking News

ಬಿಗ್ ನ್ಯೂಸ್: ಸಚಿವ ಸ್ಥಾನ ವಂಚಿತರಿಗೆ ಸಿಹಿ ಸುದ್ದಿ, ಸಂಪುಟ ಪುನಾರಚನೆ ಮಾಹಿತಿ ನೀಡಿದ ರಮೇಶ್ ಜಾರಕಿಹೊಳಿ

Spread the love

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿ 7 ಮಂದಿ ನೂತನ ಸಚಿವರು ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.

ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಸಂಪುಟ ಪುನಾರಚನೆ ಪ್ರಕ್ರಿಯೆ ದೊಡ್ಡಮಟ್ಟದಲ್ಲಿ ನಡೆಯಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸಚಿವ ಸ್ಥಾನ ಕೈತಪ್ಪಿದವರಿಗೆ ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಸಂಪುಟ ಪುನಾರಚನೆ ವೇಳೆ ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.

ಹೆಚ್. ವಿಶ್ವನಾಥ್, ಮಹೇಶ್ ಕುಮಟಳ್ಳಿ, ಮುನಿರತ್ನ ಅವರಿಗೆ ಅವಕಾಶ ಸಿಗಲಿದೆ. ಕಲಬುರ್ಗಿ ಭಾಗದಲ್ಲಿ ದೊಡ್ಡ ವ್ಯಕ್ತಿಯನ್ನು ಸೋಲಿಸಿದ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಸಚಿವ ಸ್ಥಾನ ಸಿಗಬೇಕಿದೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸರ್ಕಾರ ರಚನೆಯಲ್ಲಿ ಸಿ.ಪಿ. ಯೋಗೇಶ್ವರ್ ಪ್ರಮುಖ ಪಾತ್ರ ವಹಿಸಿದ್ದು, ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಿರುವುದು ಸಂತಸ ತಂದಿದೆ. ವಿಶ್ವನಾಥ್ ಹಿರಿಯರಿದ್ದು, ಅವರಿಗೆ ಸಚಿವ ಸ್ಥಾನ ನೀಡಲು ಕಾನೂನು ತೊಡಕಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.


Spread the love

About Laxminews 24x7

Check Also

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Spread the loveಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ