Breaking News

ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದು ಮತ್ತೆ ವಿವಾದ ಸೃಷ್ಟಿಸಿದ ಸಂಸದೆ ಪ್ರಜ್ಞಾ ಸಿಂಗ್

Spread the love

ಉಜ್ಜಯಿನಿ: ಪದೇ ಪದೇ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುತ್ತಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಈಗ ಮತ್ತೆ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ‘ದೇಶಭಕ್ತ’ ಎಂದು ಕರೆಯುವ ಮೂಲಕ ಮತ್ತೊಮ್ಮೆ ವಿವಾದ ಎಬ್ಬಿಸಿದ್ದಾರೆ.

ಪ್ರಜ್ಞಾ ಠಾಕೂರ್ ಮಂಗಳವಾರ ಸಂಜೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ ‘ಆ ಪಕ್ಷದವರು ಯಾವಾಗಲೂ ನಿಜವಾದ ದೇಶಭಕ್ತರನ್ನು ನಿಂದಿಸುತ್ತಾರೆ’ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಗೋಡ್ಸೆಯನ್ನು ‘ಮೊದಲ ಭಯೋತ್ಪಾದಕ’ ಎಂದು ಬಣ್ಣಿಸಿದ ಹಿನ್ನೆಲೆಯಲ್ಲಿ ಸಂಸದೆ ಈ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಂಗ್ರೆಸ್ ಯಾವಾಗಲೂ ನಿಜ ದೇಶಭಕ್ತರನ್ನು ನಿಂದಿಸುತ್ತದೆ, ಅವರನ್ನು ‘ಕೇಸರಿ ಭಯೋತ್ಪಾದಕರು’ ಎಂದು ಕರೆಯುತ್ತದೆ. ಇದಕ್ಕಿಂತ ಕೆಟ್ಟದ್ದೇನನ್ನೂ ಹೇಳಲು ಸಾಧ್ಯವಿಲ್ಲ.ಈ ವಿಷಯದ ಬಗ್ಗೆ ಹೆಚ್ಚಿನದನ್ನು ಹೇಳಲು ನಾನು ಬಯಸುವುದಿಲ್ಲ’ ಎಂದು ಗೋಡ್ಸೆ ಕುರಿತು ಸಂಸದೆ ಪ್ರಜ್ಞಾ ಠಾಕೂರ್ ಸುದ್ದಿಗಾರರಿಗೆ ತಿಳಿಸಿದರು.

 


Spread the love

About Laxminews 24x7

Check Also

ಉತ್ತರ ಕನ್ನಡ ಡಿಸಿಸಿ ಬ್ಯಾಂಕ್ ಚುನಾವಣೆ: ಶಾಸಕ ಶಿವರಾಮ್ ಹೆಬ್ಬಾರ್ ಬಣಕ್ಕೆ ಮುನ್ನಡೆ

Spread the love ಶಿರಸಿ: ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಕೆಡಿಸಿಸಿ) ಆಡಳಿತ ಮಂಡಳಿ ಚುನಾವಣೆಯಲ್ಲಿ ಪ್ರಕಟಗೊಂಡ ಹಾಗೂ ಮುಂಚೂಣಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ