Breaking News

ನೋಡಲು ಆಗದಂತಹ ಸಿಡಿಗಳೂ ಇವೆ : ಯತ್ನಾಳ್

Spread the love

ಬಾಗಲಕೋಟೆ: ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಶಾಸಕರ ಅಸಮಾಧಾನ ಭುಗಿಲೆದ್ದಿದ್ದು, ಸಿಡಿ ವಿಚಾರನ್ನಿಟ್ಟುಕೊಂಡು ಸಿಎಂ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಸ್ವಪಕ್ಷೀಯ ಶಾಸಕರೇ ಒಂದರ ಮೇಲೊಂದರಂತೆ ಆರೋಪಗಳನ್ನು ಮಾಡುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆ ಕೂಡಲಸಂಗಮದಲ್ಲಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪನವರ ಭ್ರಷ್ಟಾಚಾರ ಸಿಡಿ ಮಾತ್ರವಲ್ಲ, ನೋಡಲು ಆಗದಂತಹ ಸಿಡಿಗಳೂ ಇವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ನನ್ನ ಬಳಿ ಬಂದಿದ್ದ 3 ಶಾಸಕರ ಬಳಿ ಆ ಸಿಡಿಗಳಿವೆ. ಆದರೆ ನಾನು ಅಂಥಹ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುವಂತವನಲ್ಲ. ಹಾಗೆ ಮಾಡುವವನಾಗಿದ್ದರೆ ಇಂದು ನಾನು ಡಿಸಿಎಂ ಆಗುತ್ತಿದ್ದೆ ಎಂದಿದ್ದಾರೆ.

ಕೇವಲ ಬಿಜೆಪಿ ಶಾಸಕರ ಬಳಿ ಮಾತ್ರವಲ್ಲ ಆ ಸಿಡಿ ವಿಪಕ್ಷ ಕಾಂಗ್ರೆಸ್ ನಾಯಕರ ಬಳಿಯೂ ಇದೆ. ಡಿಕೆಶಿ, ಜಮೀರ್ ಅಹ್ಮದ್, ಜಾರ್ಜ್ ಬಳಿಯೂ ಆ ಸಿಡಿ ಇದೆ. ಸಿಡಿ ಇಟ್ಟುಕೊಂಡು ಕಾಂಗ್ರೆಸ್ ನವರು ಸಿಎಂ ಅವರಿಂದ ಹೆಚ್ಚು ಅನುದಾನ ಪಡೆಯುತ್ತಿದ್ದಾರೆ. ನಾವು ಅನುದಾನ ಕೇಳಿದರೆ ವಿಷ ಕುಡಿಯಲೂ ಹಣವಿಲ್ಲ ಎನ್ನುತ್ತಾರೆ. ಆದರೆ ಕಾಂಗ್ರೆಸ್ ನಾಯಕರಿಗೆ ಅನುದಾನ ನೀಡುತ್ತಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರಿಗೆ ನೈತಿಕತೆ ಎಂಬುದಿದ್ದರೆ ಆ ಸಿಡಿಗಳನ್ನು ಬಿಡುಗಡೆ ಮಾಡಲಿ ಎಂದು ಶಾಸಕ ಯತ್ನಾಳ್ ಸವಾಲು ಹಾಕಿದ್ದಾರೆ.


Spread the love

About Laxminews 24x7

Check Also

ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆಯ ಕಾರ್ಯಕ್ಕೆ ಒಲಿದು ಬಂತು ರಾಷ್ಟ್ರಮಟ್ಟದ ಪ್ರಶಸ್ತಿ

Spread the love ಬಾಗಲಕೋಟೆ: ಮಹಿಳೆಯರು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಹಿಳಾ ಸಂಘಟನೆಯೊಂದು ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ