Breaking News

ರಾಜ್ಯ ರಾಜಕೀಯದಲ್ಲಿ ಯತ್ನಾಳ್​ ಸಿಡಿಸಿದ ಸಿಡಿ ಸ್ಫೋಟ; ಬಹಿರಂಗ ಹೇಳಿಕೆ ನೀಡದಂತೆ ಎಲ್ಲಾ ನಾಯಕರುಗಳಿಗೆ ಬಿಜೆಪಿ ಸೂಚನೆ

Spread the love

ಬೆಂಗಳೂರು (ಜನವರಿ 15); ಬಿಜೆಪಿ ಪಕ್ಷದೊಳಗೆ ಕಳೆದ ಕೆಲ ದಿನಗಳಿಂದ ಒಳಬೇಗುದಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿರುದ್ಧ ಮಾತನಾಡುವವರ ಸಂಖ್ಯೆಯೂ ಏರುತ್ತಲೇ ಇದೆ. ಈ ನಡುವೆ ಗುರುವಾರ ಹೊಸ ಬಾಂಬ್ ಸಿಡಿಸಿದ್ದ ಮಾಜಿ ಕೇಂದ್ರ ಸಚಿವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​, “ಕಣ್ಣಿನಿಂದ ನೋಡಲಾಗದಂತಹ ಸಿಡಿ ಇದೆ. ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಆ ಸಿಡಿಯನ್ನು ಮಾಡಿದ್ದೇ ಅವರ ಮೊಮ್ಮಗ. ಹಿಂದೆ ಇದ್ದದ್ದೇ ಆ ಸಿಡಿ, ಯಾರೊಂದಿಗೆ ಇದೆ ಅಂತ ತಮಗೆಲ್ಲಾ ಅದು ಗೊತ್ತೇ ಇದೆ. ನಾನು ಆ ಬಗ್ಗೆ ಏನು ಹೇಳಬೇಕಿಲ್ಲ. ಈ ಸಿಡಿಯನ್ನು ಮುಂದಿಟ್ಟು ಯಡಿಯೂರಪ್ಪನವರನ್ನು ಬ್ಲ್ಯಾಕ್​ಮೇಲ್ ಮಾಡಿ ಹಲವರು ಸಚಿವರಾಗುತ್ತಿದ್ದಾರೆ” ಎಂದು ಆರೋಪಿಸಿದ್ದರು. ಇದರ ಬೆನ್ನಿಗೆ ರಾಜ್ಯ ರಾಜಕೀಯದಲ್ಲಿ ಸಿಡಿ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದಾಗುತ್ತಿದ್ದು, ಡ್ಯಾಮೇಜ್​ ಕಂಟ್ರೋಲ್​ಗೆ ಮುಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್​ ಈ ಕುರಿತು ಯಾರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಎಲ್ಲಾ ಶಾಸಕರಿಗೂ ಎಚ್ಚರಿಕೆ ನೀಡಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಕಳೆದ ಹಲವು ದಿನಗಳಿಂದ ಬಿ.ಎಸ್​. ಯಡಿಯೂರಪ್ಪ ವಿರುದ್ಧ ಕಿಡಿಕಾರುತ್ತಲೇ ಇದ್ದಾರೆ. ಬಿಎಸ್​ವೈ ಹಾಗೂ ಯತ್ನಾಳ್​ ಜಟಾಪಟಿ ಪಕ್ಷದ ಮುಜುಗುರಕ್ಕೂ ಕಾರಣವಾಗಿದೆ. ಆದರೆ, ಗುರುವಾರ ಮತ್ತೂ ಒಂದು ಹೆಜ್ಜೆ ಮುಂದಿಟ್ಟಿದ್ದ ಯತ್ನಾಳ್, “ಕಣ್ಣಿನಿಂದ ನೋಡಲಾಗದ ಸಿಡಿ ಒಂದು ರಾಜ್ಯ ರಾಜಕೀಯದಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಆ ಸಿಡಿಯನ್ನೇ ಮೂವರು ನನ್ನ ಬಳಿ ತೆಗೆದುಕೊಂಡು ಬಂದಿದ್ದರು. ಅದರಲ್ಲಿ ಇಬ್ಬರು ಈಗ ಸಚಿವರಾಗಿದ್ದಾರೆ.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ