ಚಿಕ್ಕೋಡಿ(ಬೆಳಗಾವಿ): ಮಂಗಳವಾರ ರಾತ್ರಿಯಿಂದ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳಲ್ಲಿ ಲಾಕ್‍ಡೌನ್ ಜಾರಿಯಾಗಿದೆ.
ಮುಂದಿನ ಒಂದು ವಾರಗಳ ಲಾಕ್‍ಡೌನ್ ಜಾರಿಯಲ್ಲಿದ್ದು, ಅಗತ್ಯ ಸೇವೆ ಹೊರತುಪಡಿಸಿ ವ್ಯಾಪಾರ ವಹಿವಾಟು, ಸಾರಿಗೆ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಅನಗತ್ಯವಾಗಿ ಹೊರಗಡೆ ಓಡಾಡದಂತೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲೇ ಅತೀ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣ ಹೊಂದಿರುವ ಅಥಣಿ ಪಟ್ಟಣದಲ್ಲಿ ಅನಗತ್ಯವಾಗಿ ಓಡಾಡುತಿದ್ದವರಿಗೆ ಪೊಲೀಸರು ಲಾಠಿ ಏಟು ನೀಡದ್ದಾರೆ. ಅಥಣಿ ತಾಲೂಕಿನಾದ್ಯಂತ ಕಟ್ಟುನಿಟ್ಟಾದ ಲಾಕ್‍ಡೌನ್ ಪಾಲನೆಗೆ ಪ್ರತಿ ಗ್ರಾಮ ಸೇರಿದಂತೆ ಪಟ್ಟಣದ ಗಲ್ಲಿಗಲ್ಲಿಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಮನೆಯಿಂದ ಹೊರಬರುವ ಪ್ರತಿಯೊಬ್ಬರ ಐಡಿ ಕಾರ್ಡ್‍ಗಳನ್ನು ಪೊಲೀಸರು ಚೆಕ್ ಮಾಡುತ್ತಿದ್ದು, ಅನಗತ್ಯವಾಗಿ ಹೊರಬಂದಿದ್ದು ಕಂಡುಬಂದಲ್ಲಿ ಕೇಸ್ ಕೂಡ ದಾಖಲು ಮಾಡುತ್ತಿದ್ದಾರೆ.ಇನ್ನೂ ನಿಪ್ಪಾಣಿ ಹಾಗೂ ಕಾಗವಾಡ ಸೇರಿದಂತೆ ಲಾಕ್ ಡೌನ್ ಗೆ ಜನ ಬೆಂಬಲ ವ್ಯಕ್ತವಾಗಿದೆ.