ಬೆಂಗಳೂರು,ಜ.15- ವಿಧಾನಸೌಧದಲ್ಲಿ ನಾಳೆ ನಡೆಯುವ ಅಧಿಕೃತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ವಿಧಾನಸೌಧದ ಬಾಂಕ್ವೆಟ್‍ಹಾಲ್ ಮತ್ತಿತರ ಕಡೆಗಳಲ್ಲಿ ಸ್ಯಾನಿಟೈಸ್ ಮಾಡಲಾಗಿದೆ.
ಅಲ್ಲದೆ, ವಿಧಾನಸೌಧದ ಸುತ್ತಮುತ್ತ ಸ್ವಚ್ಛಗೊಳಿಸಲಾಯಿತು. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ತುರ್ತು ಸ್ಪಂದನಾ ಬೆಂಬಲ ವಾಹನಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಹಾಗೂ ಬಾಂಕ್ವೆಟ್ ಹಾಲ್‍ನಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ವಿವಿಧೆಡೆ ನಿರ್ಮಿಸಿರುವ ವಸತಿ ಗೃಹಗಳನ್ನು ಲೋಕಾರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರು ಭಾಗವಹಿಸಲಿದ್ದಾರೆ.
Laxmi News 24×7