Breaking News

ಜ.22ರಂದು ‘ಬೆಂಗಳೂರು ಬಂದ್’ : ಕಾರಣ ಏನ್ ಗೊತ್ತಾ.?

Spread the love

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಬಂದ್ ಆದ್ರೂ, ಪರಿಣಾಮ ಬೀರೋದು, ಬೆಂಗಳೂರಿನ ವ್ಯಾಪಾರ ವಹಿವಾಟಿನ ಮೇಲೆ. ಕೊರೋನಾ ಮಧ್ಯೆಯೂ ಈಗಾಗಲೇ ಕರ್ನಾಟಕ ಬಂದ್, ಸೇರಿದಂತೆ ವಿವಿಧ ಬಂದ್ ಗಳಿಂದಾಗಿ ಜನರು ಹೈರಾಣಾಗಿ ಹೋಗಿದ್ದಾರೆ. ಇದರ ಮಧ್ಯೆಯೂ ಜನವರಿ 22ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಅದು ಯಾಕೆ ಎನ್ನುವ ಬಗ್ಗೆ ಮುಂದೆ ಓದಿ..

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಗಾಗಲೇ ಅನೇಕರನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ. ಆದ್ರೇ ಹೀಗೆ ಬಂಧಿಸಿರುವವರಲ್ಲಿ ಅನೇಕರು ಅಮಾಯಕರು. ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಜನವರಿ 22ಕ್ಕೆ 28 ಮುಸ್ಲಿಂ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿವೆ.

ಈ ಕುರಿತಂತೆ ಸುದ್ದಿ ಸಂಸ್ಥೆಗಳಿಗೆ ಮಾಹಿತಿ ನೀಡಿರುವಂತ ವಿವಿಧ ಮುಸ್ಲಿಂ ಸಂಘಟನೆಗಳು, ಜನವರಿ 22ರಂದು 28ಕ್ಕೂ ಹೆಚ್ಚು ಮುಸ್ಲೀಂ ಸಂಘಟನೆಗಳು ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಿರುವುದನ್ನು ಖಂಡಿಸಿ ಕರೆ ನೀಡಲಾಗಿದೆ. ಇದೇ ಕೇವಲ ಬೆಂಗಳೂರು ಗಲಭೆಗೆ ಮಾತ್ರ ಸೀಮಿತವಾಗಿಲ್ಲ. ಇದರೊಂದಿಗೆ ಲವ್ ಜಿಹಾದ್, ಕೃಷಿ ಕಾಯ್ದೆ ವಿರುದ್ಧವೂ ಪ್ರತಿಭಟನೆ ನಡೆಸಲು, ಬೆಂಗಳೂರು ಬಂದ್ ಗೆ ಕರೆ ನೀಡಲಾಗಿರುವುದಾಗಿ ತಿಳಿಸಿವೆ.

ಜನವರಿ 22ರಂದು ಬೆಳಿಗ್ಗೆಯಿಂದ ಸಂಜೆ 5 ಗಂಟೆಯವರೆಗೆ ಎಲ್ಲಾ ಮುಸ್ಲಿಂ ಮಾಲೀಕರು ತಮ್ಮ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಮನವಿ ಮಾಡಿರುವಂತ ಮುಸ್ಲೀಂ ಸಂಘಟನೆಗಳು, ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಬೆಂಗಳೂರು ಬಂದ್ ನಡೆಸಲಾಗುತ್ತದೆ ಎಂದು ತಿಳಿಸಿವೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ