ಬೆಂಗಳೂರು : ದೇಶಾದ್ಯಂತ ಇಂದಿನಿಂದ ಕೊರೋನಾ ಸೋಂಕಿನ ಲಸಿಕಾ ವಿತರಣೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ, ರಾಜ್ಯದಲ್ಲೂ ಲಸಿಕಾ ಅಭಿಯಾನ ಆರಂಭಗೊಂಡಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ನೀಡಿದೆ ಆರಂಭಗೊಂಡಿದ್ದು, ರಾಜ್ಯದಲ್ಲೇ ಮೊದಲ ಲಸಿಕೆಯನ್ನು ಕೆಸಿ ಜನರಲ್ ಆಸ್ಪತ್ರೆಯ ಡಿ.ಗ್ರೂಪ್ ನೌಕರ ಚಂದ್ರಶೇಖರ್ ಪಡೆಯುವ ಮೂಲಕ ಆರಂಭಗೊಂಡಿದೆ.
ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅತಿದೊಡ್ಡ ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನ ನೀಡಿದ್ದಾರೆ. ಹೀಗೆ ಚಾಲನೆಗೊಂಡಂತ ಲಸಿಕೆಯ ಅಭಿಯಾನ ರಾಜ್ಯದಲ್ಲೂ ಶುರುವಾಗಿದೆ. ರಾಜ್ಯದಲ್ಲಿ ಮೊದಲ ಲಸಿಕಾ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚಾಲನೆ ನೀಡಿದ್ದಾರೆ. ಈ ಬಳಿಕ ಕೆಸಿ ಜನರಲ್ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಮೊದಲ ಲಸಿಕೆ ನೀಡಿದೆ ಆರಂಭಗೊಂಡಿತು. ಕೆಸಿ ಜನರಲ್ ಆಸ್ಪತ್ರೆಯ ಡಿ.ಗ್ರೂಪ್ ನೌಕರ ಚಂದ್ರಶೇಖರ್ ಅವರಿಗೆ ಮೊದಲ ಲಸಿಕೆಯನ್ನು ರಾಜ್ಯದಲ್ಲಿ ನೀಡಲಾಗಿದೆ.