Breaking News

ಪತ್ನಿಯ ಅಶ್ಲೀಲ, ಫೋಟೋ ವಿಡಿಯೋ ತೆಗೆದು ಕಿರುಕುಳ

Spread the love

ಬೆಂಗಳೂರು: ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ತೆಗೆದು ಕಿರುಕುಳ ನೀಡಿ ಬೆದರಿಕೆ ಹಾಕುತ್ತಿದ್ದ ಗಂಡನ ವಿರುದ್ಧ ಮಹಿಳೆ ದೂರು ನೀಡಿದ್ದಾರೆ.

ಫ್ರೆಜರ್ ಟೌನ್ ನಿವಾಸಿಯಾಗಿರುವ 39 ವರ್ಷದ ಮಹಿಳೆ ದೂರು ನೀಡಿದ್ದು, ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. 2019 ರಲ್ಲಿ ದಂಪತಿಗೆ ಮದುವೆಯಾಗಿದ್ದು ಆರಂಭದಲ್ಲಿ ಅನ್ಯೋನ್ಯವಾಗಿದ್ದ ಪತಿರಾಯ ನಂತರದಲ್ಲಿ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಹಲ್ಲೆ ಮಾಡುತ್ತಿದ್ದ ಆರೋಪಿ ಪತ್ನಿ ಅಕ್ರಮ ಸಂಬಂಧ ಹೊಂದಿರುವುದಾಗಿ ಶಂಕಿಸಿ ಆಕೆಯ ಸಹೋದ್ಯೋಗಿಗಳಿಗೆ ಕರೆ ಮಾಡುತ್ತಿದ್ದ ಎನ್ನಲಾಗಿದೆ.

ಮೊಬೈಲ್ ನಲ್ಲಿ ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ಚಿತ್ರೀಕರಿಸಿ ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೇ, ಮದ್ಯಪಾನ ಮಾಡಿ ಮನೆಗೆ ಬರುತ್ತಿದ್ದ ಆರೋಪಿ ತನಗೆ ಮದ್ಯ, ಸಿಗರೇಟ್ ತಂದುಕೊಡುವಂತೆ ಪತ್ನಿಗೆ ಪೀಡಿಸುತ್ತಿದ್ದ. ನಿರಾಕರಿಸಿದಾಗ ಪತ್ನಿ, ಮಗನನ್ನು ಕೊಲೆಮಾಡಿ ಪತ್ನಿ ಸಹೋದರಿ ಮೇಲೆ ಅತ್ಯಾಚಾರ ಎಸಗುವುದಾಗಿ ಬೆದರಿಸುತ್ತಿದ್ದ ಎಂದು ಮಹಿಳೆ ದೂರು ನೀಡಿದ್ದಾರೆ.

ಮದುವೆಯ ಸಂದರ್ಭದಲ್ಲಿ ಆತನಿಗೆ ಕಾರು ನೀಡಲಾಗಿದ್ದು, ಅದನ್ನು ಪತ್ನಿಗೆ ಹೇಳದೆ ಮಾರಾಟ ಮಾಡಿದ್ದ. ಪ್ರಶ್ನಿಸಿದಾಗ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ್ದ. ಆತ ಈ ಮೊದಲೇ ಮೂರು ಮದುವೆಯಾಗಿರುವುದು ಗೊತ್ತಾಗಿದೆ. ಆತನ ಕಿರುಕುಳದಿಂದ ನೊಂದ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ