ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ.
ಚೆನ್ನಮ್ಮ ವೃತ್ತದಲ್ಲಿ ಸೇರಿದ ನೂರಾರು ಕನ್ನಡಪರ ಹೋರಾಟಗಾರರು, ಮಹಾ ಸಿಎಂ ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ನಿನ್ನೆ ನಾಡದ್ರೋಹ ಘೋಷಣೆ ಕೂಗಿ ಪುಂಡಾಟ ಮೆರೆದಿದ್ದ ಎಂಇಎಸ್ ಪುಂಡರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
Laxmi News 24×7