ಬೆಳಗಾವಿ ನಮ್ಮದು, ರಾಜ್ಯದ ಅವಿಭಾಜ್ಯ ಅಂಗ
ಬೆಂಗಳೂರು: ಇತ್ಯರ್ಥವಾಗಿರುವ ವಿಷಯವನ್ನ ಕೆಣಕಲು ಬರಬೇಡಿ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಉದ್ಧವ್ ಠಾಕ್ರೆ ಅವರೇ, ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ಹೇಳಿದ್ದಾರೆ
Laxmi News 24×7