Breaking News
Home / ಜಿಲ್ಲೆ / ಬೆಂಗಳೂರು / ಎಂಇಎಸ್‍ಗೆ ಸರಿಯಾದ ಪೆಟ್ಟು ಕೊಟ್ಟಿದ್ರೆ ಈ ಮಾತುಗಳ ಬರ್ತಿರಲಿಲ್ಲ

ಎಂಇಎಸ್‍ಗೆ ಸರಿಯಾದ ಪೆಟ್ಟು ಕೊಟ್ಟಿದ್ರೆ ಈ ಮಾತುಗಳ ಬರ್ತಿರಲಿಲ್ಲ

Spread the love

ಬೆಂಗಳೂರು: ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಒಂದು ಬಾರಿ ಇತಿಹಾಸವನ್ನ ಅವಲೋಕಿಸಿದ್ರೆ ಯಾರು ಯಾರ ಭಾಗವನ್ನ ಅತಿಕ್ರಮಿಸಿಕೊಂಡಿದ್ದಾರೆ ಅನ್ನೋದು ಅರಿವಾಗಲಿದೆ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಖಡಕ್ ತಿರುಗೇಟು ನೀಡಿದ್ದಾರೆ.

ಒಮ್ಮೆ ಇತಿಹಾಸವನ್ನ ಅವಲೋಕಿಸಿ: ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ. ಬಹುತೇಕ ಕನ್ನಡಿಗ ರಾಜರು ಮಹಾರಾಷ್ಟ್ರದ ಬಹುಪಾಲನನ್ನು ಆಗಲೇ ಆಳಿದ್ದಾರೆ. ಕನ್ನಡಿಗರ ಸಾಹಸ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದೆ. ಉದ್ಧವ ಠಾಕ್ರೆ ಒಂದು ಬಾರಿ ಇತಿಹಾಸವನ್ನು ಅವಲೋಕಿಸಿದರೆ, ಈಗ ಯಾರು ಯಾರ ಪ್ರದೇಶಗಳನ್ನು ಆಕ್ರಮಿಸಿದ್ದಾರೆ ಎಂಬುದೂ ಗೊತ್ತಾಗುತ್ತದೆ. ಯಾರು ಯಾರ ಪ್ರದೇಶವನ್ನು ಬಿಟ್ಟುಕೊಡಬೇಕೆಂಬುದೂ ತಿಳಿಯುತ್ತದೆ ಎಂದು ಟೀಕಿಸಿದ್ದಾರೆ


Spread the love

About Laxminews 24x7

Check Also

ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

Spread the love ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ, ಹೈನುಗಾರಿಕೆ, ದ್ರಾಕ್ಷಿ ಮತ್ತು ತರಕಾರಿ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ