Breaking News

ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಪ್ರಯತ್ನ ನಡೆದರೆ ರಕ್ತಕ್ರಾಂತಿ ಆಗುತ್ತೆ : ವಾಟಾಳ್ ನಾಗರಾಜ್ ಎಚ್ಚರಿಕೆ

Spread the love

ಬೆಂಗಳೂರು : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿವೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಪ್ರಯತ್ನ ನಡೆದರೆ ರಕ್ತಕ್ರಾಂತಿ ಆಗುತ್ತೆ. ಸಿಎಂ ಯಡಿಯೂರಪ್ಪಗೆ ಶಕ್ತಿ, ಪ್ರೀತಿ, ಬದ್ಧತೆ ಇಲ್ಲ. ಬೆಳಗಾವಿ, ಕಾರವಾರದ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ. ಬೆಳಗಾವಿ ಮಹಾರಾಷ್ಟ್ರ ಗಡಿ ಬಂದ್ ಆಗಲೇಬೇಕು. ಎಂಇಎಸ್ , ಶಿವಸೇನೆಯನ್ನು ಗಡಿಪಾರ್ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಒಬ್ಬ ಹುಚ್ಚ. ನಾಳೆ ಬೆಳಗ್ಗೆ 11.30 ಕ್ಕ ಮುಂದಿನ ಹೋರಾಟದ ಬಗ್ಗೆ ಸಭೆ ಸೇರಿ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ