Breaking News
Home / ರಾಜಕೀಯ / ಉತ್ತಮ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡಿದ ಲಕ್ಷ್ಮಣ ಸವದಿ,

ಉತ್ತಮ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡಿದ ಲಕ್ಷ್ಮಣ ಸವದಿ,

Spread the love

ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ಬಸ್ ನಿಲ್ದಾಣದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ, ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಸಂಸದರಾದ ಜಿ.ಎಮ್.ಸಿದ್ದೇಶ್ವರ ನೆರವೇರಿಸಿದರು.

ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ನಿಗಮದ ಬಸ್ಸುಗಳ ಉತ್ತಮ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಹೊಳಲ್ಕೆರೆ ಶಾಸಕರಾದ ಎಂ.ಚಂದ್ರಪ್ಪ ನೂತನ ಬಸ್ ಮಾರ್ಗಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಣಗೆರೆ ಉತ್ತರ ಕ್ಷೇತ್ರದ ಶಾಸಕರಾದ ಎಸ್. ಎ.ರವೀಂದ್ರನಾಥ ವಹಿಸಿದ್ದರು.

ಮಾಯಕೊಂಡ ಶಾಸಕರಾದ ಎನ್. ಲಿಂಗಣ್ಣ, ನವಲಗುಂದ ಶಾಸಕರು ಹಾಗೂ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷರಾದ ಶಂಕರ್ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ