Breaking News
Home / ರಾಜ್ಯ / 34 ವರ್ಷಗಳಿಂದ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೂ ಸೇವೆ ಕಾಯಂಗೊಳಿಸಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು, ಆತ್ಮಹತ್ಯೆ

34 ವರ್ಷಗಳಿಂದ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೂ ಸೇವೆ ಕಾಯಂಗೊಳಿಸಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು, ಆತ್ಮಹತ್ಯೆ

Spread the love

ಗಂಗಾವತಿ: ಅರಣ್ಯ ಇಲಾಖೆಯಲ್ಲಿ 34 ವರ್ಷಗಳಿಂದ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೂ ಸೇವೆ ಕಾಯಂಗೊಳಿಸಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು, ಪ್ರಾದೇಶಿಕ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಆವರಣದಲ್ಲಿ ದಿನಗೂಲಿ ನೌಕರ ಮಲ್ಲಿಕಾರ್ಜುನ (59) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ಯೋಜನೆ ಅಡಿ ನೇಮಕವಾದ ನೌಕರರನ್ನು ಕಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದಾರೆ. ನಾನೂ ಮೇ ತಿಂಗಳಿನಲ್ಲಿ ನಿವೃತ್ತಿಯಾಗಲಿದ್ದೇನೆ. ಭವಿಷ್ಯ ಕಷ್ಟವಾಗಲಿದೆ. ಹಾಗಾಗಿ ನೇಣಿಗೆ ಶರಣಾಗುತ್ತಿದ್ದೇನೆ. ಕೂಡಲೇ ನೌಕರರನ್ನು ಕಾಯಂ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟಿದ್ದಾರೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈ ಸಂಬಂಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ