Breaking News
Home / Uncategorized / ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು,ರೌಡಿ ಕಾಲಿಗೆ ಪೊಲೀಸರಿಂದ ಗುಂಡೇಟು

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು,ರೌಡಿ ಕಾಲಿಗೆ ಪೊಲೀಸರಿಂದ ಗುಂಡೇಟು

Spread the love

ಬೆಂಗಳೂರು (ಜ. 19): ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ರೌಡಿಶೀಟರ್ ಜೊತೆ ಗುರುತಿಸಿಕೊಂಡಿದ್ದ ಆರೋಪಿಯೊಬ್ಬನ ಮೇಲೆ ಕೊಲೆ ಪ್ರಯತ್ನದ ಆರೋಪವಿತ್ತು. ಆತನನ್ನು ಬಂಧಿಸಲು ಹೋದಾಗ ಇಂದು ಮುಂಜಾನೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ.  ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಆರೋಪಿ 22 ವರ್ಷದ ಪ್ರವೀಣ್ ಕಾಲಿಗೆ ಪೀಣ್ಯ ಪೊಲೀಸ್ ಠಾಣೆ ಸಬ್​ ಇನ್​ಸ್ಪೆಕ್ಟರ್ ಮಾಯಣ್ಣ ಬಿರಾಣೆ ಗುಂಡು ಹಾರಿಸಿದ್ದಾರೆ. ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ತಿಪ್ಪೇನಹಳ್ಳಿ ಬಳಿ ಈ ಘಟನೆ ನಡೆದಿದೆ. ಡಕಾಯಿತಿ ಹಾಗೂ ಕೊಲೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲು ಪೊಲೀಸರು ಇಂದು ಮುಂಜಾನೆ ತೆರಳಿದ್ದರು. ತಿಪ್ಪೇನಹಳ್ಳಿಯ ಬಳಿ ಆರೋಪಿಯಿದ್ದು, ಆತನನ್ನು ಬಂಧಿಸಲು ತೆರಳಿದಾಗ ಹೆಡ್ ಕಾನ್​ಸ್ಟೇಬಲ್ ರಂಗಸ್ವಾಮಿ ಮೇಲೆ ಆರೋಪಿ ಪ್ರವೀಣ್ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ.

ಈ ವೇಳೆ ಆತ್ಮರಕ್ಷಣೆಗೆ ಆರೋಪಿ ಪ್ರವೀಣ್ ಕಾಲಿಗೆ ಗುಂಡು ಹಾರಿಸಿದ ಸಬ್​ ಇನ್​ಸ್ಪೆಕ್ಟರ್ ಆತನನ್ನು ಬಂಧಿಸಿದ್ದಾರೆ. ರಾಜಗೋಪಾಲನಗರ, ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರವೀಣ್ ವಿರುದ್ಧ ಹಲ್ಲೆ, ಡಕಾಯಿತಿ ಕೇಸ್​ಗಳು ದಾಖಲಾಗಿವೆ. ರೌಡಿಶೀಟರ್ ಅನಿಲ್ ಜೊತೆ ಗುರುತಿಸಿಕೊಂಡಿದ್ದ ಆರೋಪಿ ಪ್ರವೀಣ್ ಇದೀಗ ಗುಂಡೇಟಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.


Spread the love

About Laxminews 24x7

Check Also

ರಾಹುಲ್‌ ಗಾಂಧಿ ‘ಇಂಡಿಯಾ’ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಆಗಲಿ: ಸುರ್ಜೇವಾಲಾ

Spread the love ಬೆಳಗಾವಿ: ‘ರಾಹುಲ್‌ ಗಾಂಧಿ ಅವರೇ ಮುಂದಿನ ಪ್ರಧಾನಿ ಆಗಬೇಕು ಎಂಬ ನಿರೀಕ್ಷೆ ನಮಗಿದೆ’ ಎಂದು ಎಐಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ