Breaking News

“ಸಿದ್ದರಾಮಯ್ಯಗೆ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು”

Spread the love

ಮೈಸೂರು,ಜ.19- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗ ಜ್ಯೋತಿಷ್ಯ ಹೇಳುತ್ತಿದ್ದರೋ ಗೊತ್ತಿಲ್ಲ. ಈಗ ವಿರೋಧ ಪಕ್ಷದ ನಾಯಕರಾಗಿದ್ದರೂ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅದಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡುತ್ತಿರಬೇಕು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಸಿದ್ದರಾಮಯ್ಯ ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಮೊದಲಿಗೆ ಅವರ ಪಕ್ಷದಲ್ಲಾಗುತ್ತಿರುವುದನ್ನು ನೋಡಿಕೊಳ್ಳಲಿ. ನಮ್ಮ ಪಕ್ಷದ ಉಸಾಬರಿ ಏಕೆ? ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ನಮಗೆ ಕೇಂದ್ರ ಗೃಹ ಸಚಿವರ ಸರ್ಟಿಫಿಕೇಟ್ ಸಾಕು; ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ ಅವರು ಪದೇ ಪದೇ ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ತಮ್ಮ ಪಕ್ಷದಲ್ಲಿನ ಗೊಂದಲಗಳನ್ನು ಬಗೆಹರಿಸಿಕೊಳ್ಳಲಿ. ಪ್ರಚಾರಕ್ಕಾಗಿ ಅವರು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಮುಖ್ಯಮಂತ್ರಿಗಳು ಕೋವಿಡ್ ಹಾಗೂ ಉಳಿದ ಪರಿಸ್ಥಿತಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೇ ಹೇಳಿದ್ದಾರೆ. ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಇನ್ನು 2.5 ವರೇ ವರ್ಷ ಆಡಳಿತ ನಡೆಸುತ್ತಾರೆ. ಉತ್ತಮ ಮತ್ತು ದಕ್ಷ ಆಡಳಿತ ನೀಡುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಮಗೆ ಶಾ ಅವರ ಸರ್ಟಿಫಿಕೇಟ್ ಸಾಕು. ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ. ಅದನ್ನು ಅವರೇ ಇಟ್ಟುಕೊಳ್ಳಲಿ ಎಂದು ಸಚಿವರು ಹೇಳಿದರು.

 


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ