Breaking News
Home / Uncategorized / ಕೃಷಿ ಕಾನೂನುಗಳನ್ನು ವಿರೋಧಿಸಿ ಕಾಂಗ್ರೆಸ್‌ನಿಂದ ನಾಳೆ ‘ರಾಜಭವನ ಚಲೋ’ ರ‍್ಯಾಲಿ

ಕೃಷಿ ಕಾನೂನುಗಳನ್ನು ವಿರೋಧಿಸಿ ಕಾಂಗ್ರೆಸ್‌ನಿಂದ ನಾಳೆ ‘ರಾಜಭವನ ಚಲೋ’ ರ‍್ಯಾಲಿ

Spread the love

ಬೆಂಗಳೂರು, ಜ.19- ಕೇಂದ್ರ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ಮತ್ತು ರಾಜ್ಯ, ಕೇಂದ್ರ ಸರ್ಕಾರಗಳ ವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ನಾಳೆ ರಾಜಭವನ ಚಲೋ ಹಮ್ಮಿಕೊಂಡಿದೆ. ಬೆಳಗ್ಗೆ 11 ಗಂಟೆಗೆ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೂ ಪ್ರತಿಭಟನಾ ರ‍್ಯಾಲಿ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ್ ಹಾಗೂ ಇತರ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಸೇರಿ ಕೃಷಿಗೆ ಸಂಬಂಧಿಸಿದ ಕಾಯ್ದೆಗಳ ತಿದ್ದುಪಡಿ. ಬಿಜೆಪಿ ಸರ್ಕಾರ ರಚನೆ ಸಂದರ್ಭದಲ್ಲಿ ಸಿ.ಪಿ.ಯೋಗೇಶ್ವರ್ ಸಾಲ ಮಾಡಿಕೊಂಡಿದ್ದರು ಎಂದು ಸಚಿವ ರಮೇಶ್ ಜಾರಕಿಹೊಳಿ ನೀಡಿರುವ ಹೇಳಿಕೆಯ ತನಿಖೆಯಾಗಬೇಕು ಎಂಬುದು ಸೇರಿದಂತೆ ಅನೇಕ ವಿಷಯಗಳನ್ನು ಮುಂದಿಟ್ಟುಕೊಂಡು ನಾಳೆ ಪ್ರತಿಭಟನೆ ನಡೆಸಲಾಗುತ್ತಿದೆ.ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ ಕಾಂಗ್ರೆಸ್ ನಾಯಕರು ಹಕ್ಕೊತ್ತಾಯ ಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸಿಗರ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ನಾಳೆ ಬಿಗಿ ಪೆÇಲೀಸ್ ಬಂದೋಬಸ್ತ್ ಆಯೋಜನೆ ಮಾಡಲಾಗಿದೆ. ಸಂಚಾರ ಅಸ್ತವ್ಯಸ್ಥವಾಗುವ ಸಾಧ್ಯತೆ ಇರುವುದರಿಂದ ಪೆÇಲೀಸರು ಮುಂಜಾಗ್ರತ ಕ್ರಮವಾಗಿ ಕೆಲವು ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದೂ ಅಪರಾಧವಾಗಿತ್ತು:ಮೋದಿ

Spread the love ಜೈಪುರ(ಮಾ.23): ಲೋಕಸಭೆ ಚುನಾವಣೆಗೂ ಮುನ್ನ ನಾಯಕರು ದೇಶಾದ್ಯಂತ ನಿರಂತರವಾಗಿ ಪ್ರವಾಸ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ