ಮೈಸೂರು: ಇತ್ತೀಚೆಗೆ ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್, ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ರೈತರು ವೀಕ್ ಮೈಂಡ್ ಆದಾಗ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಾರೆ. ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ಎಂದು ಹೇಳುವ ಮೂಲಕ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ.
ರೈತರ ಆತ್ಮಹತ್ಯೆಗೆ ಸರ್ಕಾರದ ನೀತಿಗಳು ಕಾರಣ ಎಂಬುದು ಸುಳ್ಳು. ಅವರ ದುರ್ಬಲ ಮನಸ್ಸೇ ರೈತರ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಸಚಿವರು ಹೇಳಿದ್ದಾರೆ.
Laxmi News 24×7