Breaking News

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ

Spread the love

ಧಾರವಾಡ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ನಗರದ 2ನೇ ವಿಶೇಷ ಜಿಲ್ಲಾ ಹಾಗೂ ಪೋಕ್ಸೋ
ನ್ಯಾಯಾಲಯವು 5 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ.

ಇಲ್ಲಿನ ಶೀಲವಂತರ ಓಣಿಯ ಮಾಬೂಲಿ ಶೇಖ್‌ ಶಿಕ್ಷೆಗೆ ಗುರಿಯಾದವ. ಈತ ಈ ಪ್ರದೇಶದ ಅಪ್ರಾಪೆ¤ಯನ್ನು 2019ರ ಮಾ.27ರಂದು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ
ಮಾಡಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಮಾಡಿದ 2ನೇ ವಿಶೇಷ ಜಿಲ್ಲಾ ಹಾಗೂ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಪಂಚಾಕ್ಷರಿ ಅವರು, ಮಾಬೂಲಿ ಶೇಖ್‌ ಮೇಲಿದ್ದ ಆರೋಪ ಸಾಬೀತಾದ ಕಾರಣ ಪೋಕ್ಸೋ ಕಾಯ್ದೆಯಡಿ 5 ವರ್ಷ ಶಿಕ್ಷೆ, 4 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್‌ ವಾಪಸ್​: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ

Spread the loveಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ