Breaking News
Home / Uncategorized / IND vs AUS| ಟೀಂ ಇಂಡಿಯಾ ಸಾಧನೆ ಕೊಂಡಾಡಿದ ರಾಷ್ಟ್ರಪತಿ, ಪ್ರಧಾನಿ

IND vs AUS| ಟೀಂ ಇಂಡಿಯಾ ಸಾಧನೆ ಕೊಂಡಾಡಿದ ರಾಷ್ಟ್ರಪತಿ, ಪ್ರಧಾನಿ

Spread the love

ನವದೆಹಲಿ: ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್‌ ಕ್ರಿಕೆಟ್‌ ಸರಣಿ ಗೆದ್ದು ತ್ರಿವಿಕ್ರಮ ಮೆರೆದಿರುವ ಭಾರತೀಯ ಕ್ರಿಕೆಟ್‌ ತಂಡವನ್ನು ದೇಶದ ಪ್ರಮುಖರು ಹಾಡಿ ಹೊಗಳಿದ್ದಾರೆ. ಅವರ ಸಾಧನೆಯನ್ನು ಕೊಂಡಾಡಿದ್ದಾರೆ.

ರಾಷ್ಟ್ರ ಹೆಮ್ಮೆ ಪಟ್ಟಿದೆ- ರಾಮನಾಥ ಕೋವಿಂದ್‌

‘ಆಸ್ಟ್ರೇಲಿಯಾದಲ್ಲಿ ಇದು ಐತಿಹಾಸಿಕ ಕ್ರಿಕೆಟ್‌ ದಿಗ್ವಿಜಯ. ಕಠಿಣ ಟೆಸ್ಟ್ ಸರಣಿಯನ್ನು ಗೆದ್ದ ಭಾರತದ ಪ್ರತಿಭಾವಂತ ಯುವ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ತಂಡವು ಅಸಾಧಾರಣ ಕೌಶಲ ಮತ್ತು ಸ್ಥಿತಿಸ್ಥಾಪಕತೆ ಪ್ರದರ್ಶಿಸಿದೆ. ಅವರ ಸಾಧನೆಯ ಬಗ್ಗೆ ರಾಷ್ಟ್ರ ಹೆಮ್ಮೆಪಡುತ್ತದೆ,’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಟ್ವೀಟ್‌ ಮಾಡಿದ್ದಾರೆ.

ನಾವೆಲ್ಲರೂ ಖುಷಿಪಟ್ಟಿದ್ದೇವೆ- ಮೋದಿ

‘ಆಸ್ಟ್ರೇಲಿಯಾದಲ್ಲಿನ ಭಾರತೀಯ ಕ್ರಿಕೆಟ್ ತಂಡದ ಯಶಸ್ಸಿನಿಂದ ನಾವೆಲ್ಲರೂ ಖುಷಿಪಟ್ಟಿದ್ದೇವೆ. ಅವರ ಗಮನಾರ್ಹ ಶಕ್ತಿ ಮತ್ತು ಉತ್ಸಾಹ ಸರಣಿಯುದ್ಧಕ್ಕೂ ಪ್ರದರ್ಶನಗೊಂಡಿದೆ. ಪುಟಿದೇಳುವ ಚಲ, ದೃಢ ಸಂಕಲ್ಪವೂ ಕೂಡ. ತಂಡಕ್ಕೆ ಅಭಿನಂದನೆಗಳು. ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು,’ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಉತ್ತಮವಾಗಿ ಆಡಿದ ಭಾರತ – ಶಾ

‘ಐತಿಹಾಸಿಕ ಸರಣಿ ಗೆಲುವು ದಾಖಲಿಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ನಿಮ್ಮ ಗಮನಾರ್ಹ ಸಾಧನೆಯ ಬಗ್ಗೆ ಇಡೀ ರಾಷ್ಟ್ರ ಹೆಮ್ಮೆಪಡುತ್ತದೆ. ಭಾರತ ಉತ್ತಮವಾಗಿ ಆಡಿದೆ,’ ಎಂದು ಗೃಹ ಸಚಿವ ಅಮಿತ್‌ ಶಾ ಶ್ಲಾಘಿಸಿದ್ದಾರೆ.

ಬ್ರಿಸ್ಬೇನ್‌ನಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 3 ವಿಕೆಟ್‌ಗಳಿಂದ ಮಣಿಸುವ ಮೂಲಕ ಭಾರತ 4 ಪಂದ್ಯಗಳ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ನೀಡಿದ್ದ 328 ರನ್ ಗುರಿ ಬೆನ್ನತ್ತಿದ ಭಾರತ ಅಂತಿಮ ದಿನದ ಕೊನೆಯ ಅವಧಿಯಲ್ಲಿ 7 ವಿಕೆಟ್ ಕಳೆದುಕೊಂಡು 329 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.


Spread the love

About Laxminews 24x7

Check Also

ಕ್ಯಾನ್ಸರ್‌ ರೋಗಿಗಳಿಗೆ ಸಿಹಿಸುದ್ದಿ: 72 ಲಕ್ಷ ರೂ. ನ Cancer ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

Spread the love ನವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ