ಬೆಂಗಳೂರು: ‘ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಜನರ ಪ್ರತಿಭಟನೆ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ಕಾಯ್ದೆಗಳ ವಿರುದ್ಧದ ‘ರಾಜಭವನ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಿನ್ನೆ ರಾತ್ರಿಯಿಂದಲೇ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆಯುತ್ತಿದ್ದಾರೆ. ಆ ಮೂಲಕ ರಾಜ್ಯ ಬಿಜೆಪಿ ಸರಕಾರ ದೌರ್ಜನ್ಯ ಮೆರೆಯುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.
ಹೋರಾಟ ನಮ್ಮ ಉಸಿರು. ಪ್ರತಿಭಟನೆ ಹಕ್ಕು ಕಸಿಯುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಪೊಲೀಸರು ಎಲ್ಲಿ ತಡೆಯುತ್ತಾರೋ ಅಲ್ಲೇ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿ, ರಸ್ತೆ ಬಂದ್ ಮಾಡಿ’ ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ಕರೆ ನೀಡಿದ್ದಾರೆ.
Laxmi News 24×7