Breaking News

ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್

Spread the love

ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ, ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ಕುಟುಂಬದ ವಿರುದ್ಧ ಹೇಳಿಕೆ ನಿಡಿದ್ದರು. ಈ ಹಿನ್ನೆಲೆಯಲ್ಲಿ ಅಖ್ತರ್ ಕಂಗನಾ ವಿರುದ್ಧ ಅಂಧೇರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಕಂಗನಾ ರಣಾವತ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ಜನವರಿ 22ರಂದು ಜುಹು ಪೊಲೀಸರ ಮುಂದೆ ವಿಚಾರಣಗೆ ಹಾಜರಾಗುವಂತೆ ಸೂಚಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ