ಬೆಂಗಳೂರು :ಖಾತೆ ಹಂಚಿಕೆ ಬೆನ್ನಲ್ಲೇ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ರಾಜ್ಯದ ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿದಾರರಿಗೆ ಜೋಳ, ರಾಗಿ ದೊರೆಯುವಂತೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ರಾಜ್ಯದ ಮಂತ್ರಿಯಾಗಿ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ಬಿಪಿಎಲ್ ಪಡಿತರದಾರರಿಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತೇನೆ. ಪಡಿತರ ಚೀಟಿ ದಾರರಿಗೆ ಜೋಳ, ರಾಗಿ, ದೊರೆಯುವಂತೆಯೂ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ಇನ್ನು ಈ ಹಿಂದೆಯೂ 13 ವರ್ಷ ಮಂತ್ರಿಯಾಗಿ ಕೆಲಸ ಮಾಡಿದ ಅನುಭವವಿದೆ. ನನಗೆ ಮಂತ್ರಿ ಸ್ಥಾನ ಹೊಸದೇನು ಅಲ್ಲ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ ಎಂದರು