ಧಾರವಾಡ : ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ ಎನ್ನುವಂತಾಗಿದೆ.
ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿತ್ತು. ಇಂತಹ ಮಾಜಿ ಸಚಿವ ವಿನಯ್ ಕುಲಕರ್ಣಿಯವರು ಜಾಮೀನಿಗಾಗಿ ಧಾರವಾಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದಿಗೆ ಮುಂದೂಡಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಂತ ನ್ಯಾಯಪೀಠವು, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ ಎನ್ನುವಂತೆ ಆಗಿದೆ.