ಬೆಂಗಳೂರು : ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಆರ್.ಟಿ. ನಗರದ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿ, ಅರ್ಧ ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದ್ದಾರೆ.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನನ್ನ ಕ್ಷೇತ್ರದ ಕೆಲ ಪೋಸ್ಟಿಂಗ್ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ರಾಜಕೀಯ ಬೆಳವಣಿಗೆ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ನಮ್ಮದು ಹಳೆಯ ಸ್ನೇಹ. ಒಂದೇ ಕುಟುಂಬದ ರೀತಿ ಇದ್ದೇವೆ. ದೇವೇಗೌಡರು ಹಾಗೂ ಎಸ್.ಆರ್. ಬೊಮ್ಮಾಯಿ ಸ್ನೇಹಿತರು. ಆ ಕಾಲದಿಂದಲೂ ನಮ್ಮ ಸ್ನೇಹ ಇದೆ ಎಂದು ಹೇಳಿದರು.