Breaking News

8 ವರ್ಷ, 264 ಕೋಟಿ ವೆಚ್ಚ- ಉದ್ಘಾಟನೆಗೊಂಡ 29 ದಿನಕ್ಕೆ ಕೊಚ್ಚಿ ಹೋದ ಬ್ರಿಡ್ಜ್

Spread the love

ಪಾಟ್ನಾ: ಬಿಹಾರದ ಗೋಪಾಲ್‍ಗಂಜ್ ನಲ್ಲಿ ಸೇತುವೆ ಉದ್ಘಾಟನೆಯಾದ 29 ದಿನದಲ್ಲಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ಸೇತುವೆ ಕೊಚ್ಚಿಕೊಂಡ ಹೋದ ಪರಿಣಾಮ ಚಂಪಾರಣ ತಿರಹುತ್ ಮತ್ತು ಸಾರಣ್ ಜಿಲ್ಲೆಗಳ ನಡುವಿನ ಸಂಪರ್ಕ ಕಡಿತಗೊಂಡಿದೆ.

ಜೂನ್ 16ರಂದು ಬಿಹಾರದ ಮುಖ್ಯಮಂತ್ರಿ ನಿತಿಶ್ ಕುಮಾರ್ ಈ ಸೇತುವೆಯನ್ನು ಉದ್ಘಾಟಿಸಿದ್ದರು. 263.47 ಕೋಟಿ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿತ್ತು. ಸೇತುವೆ ನಿರ್ಮಾಣಕ್ಕೆ ಎಂಟು ವರ್ಷ ಸಮಯ ತೆಗೆದುಕೊಂಡಿತ್ತು.

ಗಂಢಕ್ ನದಿಗೆ ಅಡ್ಡಲಾಗಿ ಗೋಪಾಲಗಂಜ್ ಜಿಲ್ಲೆಯ ಸತ್ತರಗಢ ಎಂಬಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡ 29 ದಿನದಲ್ಲಿಯೇ ಸೇತುವೆ ಕೊಚ್ಚಿ ಹೋಗಿರುವುದಕ್ಕೆ ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕಳಪೆ ಕಾಮಗಾರಿಯ ಪ್ರತಿಫಲ ಇದಾಗಿದ್ದು, ಈ ಸಂಬಂಧ ತನಿಕೆ ನಡೆಯಬೇಕೆಂದು ವಿಪಕ್ಷಗಳು ಆಗ್ರಹಿಸಿವೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ