ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ನಿರ್ದೇಶಿಸಿದೆ.
ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲು ಹೈಕೋರ್ಟ್ ಸೂಚಿಸಿದೆ.ಎಲ್ಲಾ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ಮೂರು ತಿಂಗಳ ಒಳಗೆ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.