Breaking News

ತಾಯಿ ತೀರಿದ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ

Spread the love

ಚಿಕ್ಕಮಗಳೂರು: ಕೊರೊನಾ ಸೋಂಕಿತೆ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಖುಷಿ ವಿಚಾರವಾದರೆ, ಬೇಸರದ ಸಂಗತಿ ಎಂಬಂತೆ ಮಹಿಳೆಯ ತಾಯಿ ಕೊರೊನಾಗೆ ಬಲಿಯಾಗಿದ್ದಾರೆ.

ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ದುರಾದೃಷ್ಟವಶಾತ್ ಕೊರೊನಾ ಸೋಂಕಿತೆ ಗರ್ಭಿಣಿಯ ತಾಯಿ ಕೊರೊನಾದಿಂದಾಗಿಯೇ ಸಾವನ್ನಪ್ಪಿದ್ದು, ಅಮ್ಮ ತೀರಿಕೊಂಡ ನೋವಿನಲ್ಲೂ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅಮ್ಮನೇ ಮತ್ತೆ ನನ್ನ ಹೊಟ್ಟೆಯಲ್ಲೇ ಹುಟ್ಟಿದ್ದಾಳೆ ಎಂದು ಗರ್ಭಿಣಿ ಭಾವಿಸಿದ್ದಾಳೆ.

ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ 23 ವರ್ಷದ ತುಂಬು ಗರ್ಭಿಣಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಬುಧವಾರ ಚಿಕ್ಕಮಗಳೂರಿನ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಗರ್ಭಿಣಿಯ ತಾಯಿಗೆ ಶೀತ, ಕೆಮ್ಮು, ಜ್ವರ ಎಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾದ ಬಳಿಕ ಅಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಇಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ಈ ಮಧ್ಯೆ ತುಂಬು ಗರ್ಭಿಣಿ ಅಮ್ಮನನ್ನು ಕಳೆದುಕೊಂಡ ನೋವಿನ ಮಧ್ಯೆಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಆರೋಗ್ಯವಾಗಿದ್ದು, ವೈದ್ಯರು ಇಬ್ಬರ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ಅಮ್ಮನನ್ನು ಕಳೆದುಕೊಂಡ ನೋವಿನಲ್ಲಿರುವ ತುಂಬು ಗರ್ಭಿಣಿ ಅಮ್ಮನೇ ನನ್ನ ಹೊಟ್ಟೆಯಲ್ಲಿ ಹುಟ್ಟಿದ್ದಾರೆ ಎಂದು ಭಾವಿಸಿದ್ದಾರೆ.

 


Spread the love

About Laxminews 24x7

Check Also

ಗಣೇಶೋತ್ಸವಕ್ಕೆ ಶಿವಶಂಬು ಪಥಕದಿಂದ ನಾದನಮನ: ಅನಿಲ್ ಬೆನಕೆ ಹಾಗೂ ಗಣ್ಯರ ಸಮ್ಮುಖದಲ್ಲಿ ವಾದ್ಯಪೂಜೆ, ಶೈಕ್ಷಣಿಕ ಸನ್ಮಾನ!

Spread the love • ಚವ್ಹಾಟ್ ಗಲ್ಲಿಯಲ್ಲಿ ಅದ್ಧೂರಿ ವಾದ್ಯಪೂಜೆ • ಅನಿಲ್ ಬೆನಕೆ ಹಾಗೂ ಗಣ್ಯರು ಭಾಗಿ • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ