Breaking News

ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ: ಉಮೇಶ್ ಕತ್ತಿ

Spread the love

ತುಮಕೂರು: ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ ಎಂದು ನೂತನ ಸಚಿವ ಉಮೇಶ್ ಕತ್ತಿಯವರು ಹೇಳಿಕೊಂಡಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿಯಲ್ಲಿ 75 ವರ್ಷದವರೆಗೂ ಮುಖ್ಯಮಂತ್ರಿಯಾಗುವ ಅವಕಾಶ ಇದೆ. ಎಲ್ಲರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುವ ಹಾಗೆ ನನಗೂ ಇದೆ ಎಂದು ಹೇಳಿದ್ದಾರೆ.

ನಾನೂ ಯತ್ನಾಳ್ ಇಬ್ಬರು ಹಿರಿಯರಿದ್ದೀವಿ. ಆದರೆ, ಯತ್ನಾಳ್ ಗಿಂತ ನಾನು ಸೀನಿಯರ್ ಎಂದ ಅವರು ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ತಿಳಿಸಿದರು.

ನನಗೆ ಶ್ರೀಗಳ ಆಶೀರ್ವಾದವಿದೆ. ಮುಂದಿನ ದಿನಗಳಲ್ಲಿ ಯಾವ ಸ್ಥಾನ ಸಿಕ್ಕರೂ ನಿಭಾಯಿಸುವುದಾಗಿ ತಿಳಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಂತಹ ವಿಶೇಷ ಜವಾಬ್ದಾರಿ ಕೊಟ್ಟಿದ್ದಾರೆ. ಈ ಖಾಸೆ ಸಿಕ್ಕಿರುವುದಕ್ಕೆ ನನಗೆ ಸಂತೋಷವಿದೆ. ರಾಜ್ಯಕ್ಕೆ ಹಾಗೂ ರಾಜ್ಯಕ್ಕೆ ಒಳ್ಳೆಯ ಹೆಸರು ತರುವುದಾಗಿ ಹೇಳಿದರು.

ಖಾಸೆ ಬದಲಾವಣೆ ಬಗ್ಗೆ ಕೆಲ ಸಚಿವರು ಅಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಒಂದು ಮಂತ್ರಿ ಮಂಡಲದಲ್ಲಿ ಹೆಚ್ಚು ಕಡಿಮೆ ಇರುತ್ತದೆ ಎಂದಿದ್ದಾರೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗೂ ಈಗಲೂ ಇದೆ. ಮುಂದಕ್ಕೂ ಇರಲಿದೆ. ನಾನು 8 ಬಾರಿ ಶಾಸಕನಾಗಿದ್ದೇನೆ. ಆ ಭಾಗದ ಪ್ರತಿನಿಧಿಯಾಗಿ ಹೇಳಬೇಕು ಹೇಳುತ್ತೇನೆಂದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ