Breaking News
Home / ಜಿಲ್ಲೆ / ಬೆಂಗಳೂರು / ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆ

ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆ

Spread the love

ನವದೆಹಲಿ: ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆಯಾಗಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ಕಾರಣ ಎನ್ನಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್-ಡೀಸೆಲ್ ದರ ಲೀಟರ್ ಗೆ 25 ಪೈಸೆ ಹೆಚ್ಚಳವಾಗಿದ್ದು, ಪೆಟ್ರೋಲ್ 85.70 ರೂಪಾಯಿ ಆಗಿದೆ. ಡೀಸೆಲ್ ದರ 75.88 ರೂಪಾಯಿ ತಲುಪಿದೆ.

ಮಧ್ಯಪ್ರದೇಶ ಭೋಪಾಲ್ ನಲ್ಲಿ ಪೆಟ್ರೋಲ್-ಡೀಸೆಲ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಪೆಟ್ರೋಲ್ ಲೀಟರ್ ಗೆ 93.59 ಹಾಗೂ ಡೀಸೆಲ್ ಲೀಟರ್ ಗೆ 83.85 ರೂ ತಲುಪಿದೆ.

ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 88.59 ರೂ, ಹೈದರಾಬಾದ್ ನಲ್ಲಿ 89.15 ರೂ. ತಿರುವನಂತಪುರಂನಲ್ಲಿ 87.73 ರೂ. ಆಗಿದೆ. ಡೀಸೆಲ್ ಬೆಲೆಯಲ್ಲೂ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 80.47 ರೂ, ಹೈದರಾಬಾದ್​ನಲ್ಲಿ 82.80 ರೂ. ಮುಂಬೈನಲ್ಲಿ 82.66 ರೂಗೆ ಏರಿಕೆಯಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ