Breaking News
Home / Uncategorized / ಆಹ್ವಾನ ಇದ್ದವರಿಗೆ ಮಾತ್ರ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಅವಕಾಶ

ಆಹ್ವಾನ ಇದ್ದವರಿಗೆ ಮಾತ್ರ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಅವಕಾಶ

Spread the love

ನವದೆಹಲಿ,ಜ.23-ಆಹ್ವಾನ ಪತ್ರಿಕೆ ಇಲ್ಲವೆ ಟಿಕೆಟ್ ಹೊಂದಿರುವವರಿಗೆ ಮಾತ್ರ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಆಹ್ವಾನಪತ್ರಿಕೆ ಹೊಂದಿರುವವರು ಮಾತ್ರ ಪರೇಡ್‍ಗೆ ಆಗಮಿಸಬೇಕು. 15 ವರ್ಷದೊಳಗಿನ ಮಕ್ಕಳಿಗೆ ಅವಕಾಶವಿಲ್ಲ ಎಂದು ದೆಹಲಿ ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡುತ್ತಿದ್ದಾರೆ. ಆಹ್ವಾನ ಪತ್ರಿಕೆ ಇಲ್ಲದವರು ಮನೆಯಲ್ಲೆ ಕುಳಿತು ಟಿವಿಯಲ್ಲಿ ಕಾರ್ಯಕ್ರಮ ವೀಕ್ಷಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸುವವರು ಕ್ಯಾರಿ ಬ್ಯಾಗ್, ಸೂಟ್‍ಕೇಸ್, ಪಿನ್‍ಗಳು, ತಿಂಡಿತಿನಿಸುಗಳು, ಕ್ಯಾಮರಾ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ. ಇದರ ಜೊತೆಗೆ ರಿಮೋಟ್ ಕಾರ್ ಕೀಗಳು, ಸ್ಪೋಟಕ ವಸ್ತುಗಳನ್ನು ನಿಷೇಧಿಸಲಾಗಿದೆ.

ಗಣರಾಜ್ಯೋತ್ಸವ ದಿನದಂದೇ ರೈತರು ಟ್ರಾಕ್ಟರ್ ರ್ಯಾಲಿ ನಡೆಸುವುದರಿಂದ ಈ ಭಾರಿ ಪರೇಡ್‍ಗೆ ವಿಶೇಷ ಭದ್ರತೆ ಕಲ್ಪಿಸಲಾಗಿದೆ.ರಾಜಪಥ್‍ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಮಾರುಕಟ್ಟೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Spread the love ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುವ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ