Breaking News

ಈ ಬಾರಿ ತಗ್ಗಲಿದೆ ರಾಜ್ಯ ಬಜೆಟ್ ಗಾತ್ರ

Spread the love

ಮೈಸೂರು,ಜ.23- ಈ ಬಾರಿ ಬಜೆಟ್ ಗಾತ್ರವನ್ನು ತಗ್ಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.  ನಗರದಲ್ಲಿಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ವಿಶೇಷ ವಿಮಾನದಲ್ಲಿ ಆಗಮಿಸಿದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಪನ್ಮೂಲ ಕೊರತೆ ಕಾರಣ ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯಎಂದು ಹೇಳಿದ್ದಾರು. ಶಿವಮೊಗ್ಗದಲ್ಲಿ ನಡೆದ ಗಣಿ ಸ್ಫೋಟದ ಸ್ಥಳಕ್ಕೆ ಇಂದು ಭೇಟಿ ನೀಡುತ್ತೇನೆ.

ಈ ಘಟನೆಯಲ್ಲಿ ಜಖಂ ಆಗಿರುವ ಮನೆಗಳನ್ನು ಪರಿಶೀಲಿಸಿ ಮನೆಗಳ ಮಾಲೀಕರಿಗೆ ಪರಿಹಾರ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಹಾಕಿ ಅದನ್ನು ಸಕ್ರಮ ಮಾಡಿಕೊಳ್ಳಿ.ಇಲ್ಲವೆಂದರೆ ಸ್ಥಳ ತನಿಖೆ ಮಾಡಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಅಕ್ರಮ ಗಣಿಗಾರಿಕೆ ನಡೆಸುವವರಿಗೆ ಈ ಮೂಲಕ ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿಯವರೊಂದಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತಿತರರು ಆಗಮಿಸಿದರು


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ