Breaking News

ಮತ್ತೊಮ್ಮೆ ಕರ್ನಾಟಕ ಬಂದ್ ಮಾಡುವ ಎಚ್ಚರಿಕೆ ಕೊಟ್ಟ ವಾಟಾಳ್

Spread the love

ಬೆಳಗಾವಿ, ಜ.23- ಗಡಿಯಲ್ಲಿ ಕಿಡಿಗೇಡಿ ಕೃತ್ಯ ನಡೆಸುತ್ತಿರುವ ಎಂಇಎಸ್ ಸಂಘಟನೆಯನ್ನು ಹತ್ತಿಕ್ಕಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಕನ್ನಡಪರ ಸಂಘಟನೆಗಳೊಂದಿಗೆ ಬೆಳಗಾವಿ ಚನ್ನಮ್ಮ ವೃತ್ತಕ್ಕೆ ಆಗಮಿಸಿದ ವಾಟಾಳ್ ನಾಗರಾಜ್, ನಿರ್ಮಾಪಕ ಸಾ.ರಾ. ಗೋವಿಂದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನೇರ ವಾಗ್ದಾಳಿ ನಡೆಸಿದರು.ಬೆಳಗಾವಿಯಲ್ಲಿ ಕನ್ನಡಿಗರಿಗೆ ದಶಕಗಳಿಂದಲೇ ಅನ್ಯಾಯ ನಡೆಯುತ್ತಿದೆ. ಎಂಇಎಸ್, ಶಿವಸೇನಾ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಸೇರಿ ಅಲ್ಲಿನ ನಾಯಕರು ಕರ್ನಾಟಕದ ವಿರುದ್ಧ ಸತತ ಚಿತಾವಣೆ ನಡೆಸಿದ್ದರೂ ನಮ್ಮ ರಾಜ್ಯಸರ್ಕಾರ ದಿವ್ಯಮನ ವಹಿಸಿದೆ. ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವ ಧೈರ್ಯ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ