Breaking News

ಚಂದನವನದ ಪದ್ಮಾವತಿಯ ಹೊಸ ಲುಕ್……….

Spread the love

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಅಜ್ಞಾತದಲ್ಲಿರುವ ಚಂದನವನದ ಪದ್ಮಾವತಿ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ರಮ್ಯಾ ಅಜ್ಞಾತದಲ್ಲಿದ್ದರೂ ಅಭಿಮಾನಿಗಳು ಮಾತ್ರ ಅವರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆದ್ರೆ ಸ್ಯಾಂಡಲ್‍ವುಡ್ ಕ್ವೀನ್ ದರ್ಶನಕ್ಕಾಗಿ ಎಷ್ಟೋ ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಇನ್‍ಸ್ಟಾಗ್ರಾಂ ಸ್ಟೇಟಸ್ ಡಿಫೆರೆಂಟ್ ಆಗಿ ಪೌಟ್ ಮಾಡಿ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ರಮ್ಯಾ ಪೋಸ್ಟ್ ಮಾಡಿಕೊಂಡಿದ್ದಾರೆ

ಒಟ್ಟು 10 ವಿಭಿನ್ನವಾಗಿ ಪೋಸ್ ನೀಡಿರುವ ರಮ್ಯಾ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಎರಡ್ಮೂರು ಫೋಟೋಗಳಲ್ಲಿ ಪೌಟ್ ಮಾಡಿದ್ರೆ, ಕೆಲ ಫೋಟೋಗಳಲ್ಲಿ ಕಣ್ಮುಚ್ಚಿ ಪೋಸ್ ನೀಡಿದ್ದಾರೆ. ಮತ್ತೊಂದರಲ್ಲಿ ನಮ್ಮ ನಾಯಿ ಜೊತೆ, ಮಿರರ್ ಸೆಲ್ಫಿ ಫೋಟೋ ಇದೆ.

ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ತಮ್ಮ ಟ್ವಿಟ್ಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದರು. ಇತ್ತೀಚೆಗೆ ಟ್ವಿಟ್ಟರ್ ಖಾತೆಯನ್ನು ಆ್ಯಕ್ಟಿವ್ ಮಾಡಿದ್ದಾರೆ. ಆದ್ರೆ ರಮ್ಯಾ ಎಲ್ಲಿದ್ದಾರೆ? ಏನ್ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ.

 


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ