Breaking News

BSY ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ : ಸಿದ್ದರಾಮಯ್ಯ ಆರೋಪ

Spread the love

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿರುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ. ಇದಕ್ಕೆ ಯಡಿಯೂರಪ್ಪ ಅವರ ಕುಮ್ಮಕ್ಕು ಕಾರಣ ಎಂದು ದೂರಿದರು.

ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಯೇ ಅಪರಾಧ. ಅದಕ್ಕೆ ಏನು ಶಿಕ್ಷೆ ? ಅರ್ಜಿ ಹಾಕಿಕೊಂಡು ಅಕ್ರಮವನ್ನು ಸಕ್ರಮ ಮಾಡಿಕೊಳ್ಳಿ ಎಂದು ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಹೇಳಬಹುದೇ ? ಎಂದು ಪ್ರಶ್ನಿಸಿದರು.

ಇದು ಅಕ್ರಮ ಮನೆ, ಜಮೀನು ಸಕ್ರಮ ಮಾಡುವುದಲ್ಲ. ಹಾಗಾದರೆ ಗಣಿ ಇಲಾಖೆಯ ಕಾನೂನು ಇರುವುದೇಕೆ? ಎಂದು ಮುಖ್ಯಮಂತ್ರಿಗಳ ಹೇಳಿಕೆ ಖಂಡನೆ ವ್ಯಕ್ತಪಡಿಸಿದ್ದಾರೆ. ರಾಜ್ಯದ ಯಾವುದೇ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರಲಿ, ಅದರಲ್ಲಿ ಯಾವುದೇ ಪಕ್ಷದವರು ಭಾಗಿಯಾಗಿರಲಿ. ಸರ್ಕಾರ ಕ್ರಮ ಜರುಗಿಸಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ