ಬಿಗ್ ಬಾಸ್ ಸೀಸನ್ 8 ಫೆಬ್ರವರಿ ತಿಂಗಳಲ್ಲಿ ಬರಲಿದೆ

Spread the love

ಬೆಂಗಳೂರು: ಬಹುನಿರೀಕ್ಷಿತ ಹಾಗೂ ಚರ್ಚೆಗಳಿಗೆ ಈಡಾಗುವ ಬಿಗ್ ಬಾಸ್ ಮತ್ತೆ ಬರುತ್ತಿದೆ. ಈ ಕುರಿತು ಅಧಿಕೃತ ಘೋಷಣೆಗಳು ಕಾಣಿಸಿಕೊಂಡಿದ್ದು, ಬಿಗ್ ಬಾಸ್ ಸೀಸನ್ 8 ಫೆಬ್ರವರಿ ತಿಂಗಳಲ್ಲಿ ಬರಲಿದೆ ಎಂದು ತಿಳಿದುಬಂದಿದೆ.

ಸಾಧಾರಣವಾಗಿ ಅಕ್ಟೋಬರ್ ನವೆಂಬರ್ ತಿಂಗಳಲ್ಲಿ ಬಿಗ್ ಬಾಸ್ ಪ್ರಸಾರವಾಗುತ್ತಿತ್ತು. ಆದರೆ ಕೊರೋನಾ ಕಾಲಘಟ್ಟದಿಂದ ಸಾಧ್ಯವಾಗದ ಕಾರಣ ಮುಂದೂಡಿದ್ದು, ಇದೀಗ ಪ್ರಸಾರವಾಗಲಿದೆ ಎಂದು ಹೇಳಲಾಗುತ್ತದೆ. ಈ ಬಗ್ಗೆ ಅಧಿಕೃತವಾಗಿ ಪೋಸ್ಟ್ ಮಾಡಿರುವ ಕಿಚ್ಚ ಸುದೀಪ್ ಬಿಗ್ ಬಾಸ್ ಸೀಸನ್ 8 ರ ಪ್ರಮೋಷನ್ ಆಗುತ್ತಿದೆ ಎಂದು ಅದರಲ್ಲಿ ತಿಳಿಸುತ್ತಾರೆ.

ಅಷ್ಟೇ ಅಲ್ಲದೆ, ಕಲರ್ಸ್ ಕನ್ನಡದ ಬಿಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಸುದೀಪ್ ಅವರ ಜೊತೆ ಇರುವ ಒಂದು ಫೋಟೋವನ್ನು ಶೇರ್ ಮಾಡಿ ಫೆಬ್ರವರಿಯಲ್ಲಿ ಬಿಗ್ ಬಾಸ್ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್,ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಸಹಾಯಕ ಡ್ರಗ್ ಕಂಟ್ರೋಲರ್..!!!

Spread the loveಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ