ಬೆಂಗಳೂರು, ಜ.24- ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆ ನೇಮಕಾತಿಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಸಿದಂತೆ ಸಿಸಿಬಿ ಪೊಲೀಸರು ಈವರೆಗೂ 14 ಮಂದಿ ಆರೋಪಿಗಳನ್ನು ಬಂಸಿದ್ದಾರೆ.ಬಂತ ಆರೋಪಿಗಳಿಂದ 35 ಲಕ್ಷ ನಗದು ಮತ್ತು 4 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ನಿನ್ನೆ ನಮಗೆ ಖಚಿತ ಮಾಹಿತಿ ಬಂದಿತ್ತು. ಆ ಆಧಾರದ ಮೇಲೆ ನಾವು ಚಂದ್ರು ಮತ್ತು ರಾಜಪ್ಪ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಗೊತ್ತಾಯಿತು.
ನಂತರ ಸಿಸಿಬಿ ಪೊಲೀಸ್ ಅಕಾರಿಗಳ ತಂಡಗಳು ಅವರುಗಳ ಮನೆಗಳ ಮೇಲೆ ದಾಳಿ ಮಾಡಿದಾಗ ಪ್ರಶ್ನೆ ಪತ್ರಿಕೆ ಇರುವುದು ಕಂಡುಬಂದಿತು. ಈವರೆಗೂ 14 ಮಂದಿಯನ್ನು ಬಂಸಲಾಗಿದೆ ಎಂದು ಅವರು ತಿಳಿಸಿದರು.
ಇದೊಂದು ಗಂಭೀರ ಪ್ರಕರಣವಾಗಿದ್ದು, ಪ್ರಶ್ನೆ ಪತ್ರಿಕೆ ಯಾವ ಮಟ್ಟದಲ್ಲಿ ಸೋರಿಕೆಯಾಗಿದೆ, ಈ ಪ್ರಕರಣದಲ್ಲಿ ಯಾರ್ಯಾರಿದ್ದಾರೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಸಿಸಿಬಿ ಅಕಾರಿಗಳು ತನಿಖೆ ಮಾಡುತ್ತಾರೆ. ಇದರಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆಂಬುದನ್ನು ಪತ್ತೆಹಚ್ಚಿ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ನಿನ್ನೆ ಸಿಸಿಬಿ ಪೊಲೀಸರು ವಾಣಿಜ್ಯ ತೆರಿಗೆ ಇಲಾಖೆಯ ಅಕಾರಿ ಸೇರಿದಂತೆ ಒಟ್ಟು ಆರು ಆರೋಪಿಗಳನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಬಂಸಿದ್ದು, ತನಿಖೆ ಇನ್ನೂ ಮುಂದುವರಿದಿದೆ ಎಂದು ಅವರು ಹೇಳಿದರು.