Breaking News

ಕಿಸಾನ್ ಸಂಸದ್ ಸಭೆಗೆ ವೈಯಕ್ತಿಕ ಕಾರಣದಿಂದ ಸಭೆಗೆ ಹಾಜರಾಗುತ್ತಿಲ್ಲ: ಮಾಜಿ ಪ್ರಧಾನಿ ದೇವೇಗೌಡ

Spread the love

ಬೆಂಗಳೂರು: ಕಿಸಾನ್ ಸಂಸದ್ ಸಭೆಗೆ ವೈಯಕ್ತಿಕ ಕಾರಣದಿಂದ ಸಭೆಗೆ ಹಾಜರಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ.

ಹಿರಿಯ ವಕೀಲ ಪ್ರಶಾಂತ್ ಭೂಷಣ ಅವರಿಗೆ ಪತ್ರ ಬರೆದಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಿಸಾನ್ ಸಂಸದ್ ಸಭೆಗೆ ವೈದ್ಯಕೀಯ ಕಾರಣಗಳಿಂದಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ದೈಹಿಕವಾಗಿ ಹಾಜರಾಗದಿದ್ದರೂ ನಾನು ರೈತರ ಪರವಾಗಿದ್ದೇನೆಂದು ಹೇಳಿದ್ದಾರೆ.

ಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು. ರೈತರ ಮತ್ತು ಸ್ನೇಹಿತರ ಕೂಟದಲ್ಲಿ ಭಾಗವಹಿಸಬೇಕು ಎಂಬುದು ನನ್ನ ಬಯಕೆಯಾಗಿತ್ತು. ಆದರೆ, ದುರಾದೃಷ್ಟವಶಾತ್ ವೈದ್ಯಕೀಯ ಕಾರಣದಿಂದ ಸಭೆಗೆ ಬರಲು ಸಾಧ್ಯವಾಗಿಲ್ಲ. ನಾನು ಬಡ ರೈತನ ಮಗನಾಗಿ ಜನಿಸಿದ್ದು, ನನ್ನ ರಾಜಕೀಯ ಜೀವನದಲ್ಲಿ ಕೃಷಿ ಸಮುದಾಯಗಳನ್ನು ಎಂದಿಗೂ ನಿರಾಸೆ ಮಾಡಿಲ್ಲ. ಕೇಂದ್ರದ ಮೂರು ಕೃಷಿ ಮಸೂದೆಗಳಿಗೆ ನನ್ನ ಆಕ್ಷೇಪಣೆಗಳನ್ನು ಪುನರುಚ್ಚರಿಸಲು ಈ ಅವಕಾ ಶವನ್ನು ಪಡೆದುಕೊಳ್ಳುತ್ತೇನೆ. ಸರಿಯಾದ ಸಮಾಲೋಚನೆ ಮಾಡದೆ ಕಾನೂನುಗಳಾಗಿ ಅಂಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ