Breaking News
Home / ನವದೆಹಲಿ / ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ : ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಹೆಣ್ಣು ಮಕ್ಕಳಿಗೆ ಪ್ರಧಾನಿ ಮೋದಿ ಶ್ಲಾಘನೆ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ : ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಹೆಣ್ಣು ಮಕ್ಕಳಿಗೆ ಪ್ರಧಾನಿ ಮೋದಿ ಶ್ಲಾಘನೆ

Spread the love

ನವದೆಹಲಿ : ಹೆಣ್ಣು ಮಕ್ಕಳ ಸಬಲೀಕರಣ, ಉತ್ತಮ ಆರೋಗ್ಯ ಆರೈಕೆ, ಲಿಂಗ ಸೂಕ್ಷ್ಮತೆ ಸುಧಾರಣೆ ಸೇರಿದಂತೆ ಹಲವು ಉಪಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಭಾನುವಾರ ತಿಳಿಸಿದರು.

ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು ನಾವು ನಮ್ಮ #DeshKiBeti ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನಮಸ್ಕರಿಸುತ್ತೇವೆ ಎಂದು ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಹೆಣ್ಣು ಮಕ್ಕಳ ಸಬಲೀಕರಣ, ಶಿಕ್ಷಣ, ಉತ್ತಮ ಆರೋಗ್ಯ ಆರೈಕೆ, ಲಿಂಗ ಸೂಕ್ಷ್ಮತೆ ಸುಧಾರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಅವರು ಹೇಳಿದರು.

ಹೆಣ್ಣು ಮಗುವಿನ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಮತ್ತು ಆಕೆ ಘನತೆಯ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಎಲ್ಲರನ್ನೂ ವಿಶೇಷವಾಗಿ ಶ್ಲಾಘಿಸುವ ದಿನ ಕೂಡ ಆಗಿದೆ ಎಂದು ಮತ್ತೊಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ