Breaking News

BIG NEWS : ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಒಂದೇ ವಾರದಲ್ಲಿ 3 ಬಾರಿ ಖಾತೆ ಬದಲು..!

Spread the love

ಬೆಂಗಳೂರು,ಜ.25-ಕೊನೆಗೂ ಮುನಿಸಿಕೊಂಡಿದ್ದ ಕೆಲವು ಸಚಿವರ ಅಸಮಾಧಾನವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮತ್ತೆ ಖಾತೆಗಳನ್ನು ಬದಲಾವಣೆ ಮಾಡಲಾಗಿದೆ. ಸಚಿವ ಡಾ.ಕೆ.ಸುಧಾಕರ್ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಗೆ ಜೊತೆಗೆ ವೈದ್ಯಕೀಯ ಖಾತೆಯನ್ನು ಮತ್ತೆ ಅವರಿಗೇ ನೀಡಿದ್ದಾರೆ.

ಜೊತೆಗೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಜೆ.ಸಿ.ಮಾಧುಸ್ವಾಮಿಗೆ ಈಗ ಪ್ರವಾಸೋದ್ಯಮ ಖಾತೆಯನ್ನು ನೀಡಲಾಗಿದೆ. ಕಳೆದ ವಾರ ನೂತನ ಸಚಿವರನ್ನು ಖಾತೆ ಹಂಚಿಕೆ ಮಾಡುವ ವೇಳೆ ವೈಜ್ಞಾನಿಕ ಶಿಕ್ಷಣ ಖಾತೆಯನ್ನು ಡಾ.ಕೆ.ಸುಧಾಕರ್ ಅವರಿಂದ ಹಿಂಪಡೆದು ಜೆ.ಸಿ.ಮಾಧುಸ್ವಾಮಿ ಅವರಿಗೆ ನೀಡಲಾಗಿತ್ತು. ಈ ಬೆಳವಣಿಗೆಯಿಂದ ಸುಧಾಕರ್ ಮುನಿಸಿಕೊಂಡು ಸಚಿವ ಸಂಪುಟಕ್ಕೆ ಗೈರು ಹಾಜರಾಗಿದ್ದಲ್ಲದೆ ಕೆಲವು ಸಚಿವರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿದ್ದರು


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ